ನವದೆಹಲಿ, ಫೆ. ೩: ೧೯೯೦ರ ದಶಕದ ಆರಂಭದಲ್ಲಿ ಅಯೋಧ್ಯೆಯ ರಾಮಮಂದಿರಕ್ಕಾಗಿ ರಥಯಾತ್ರೆ ಮೂಲಕ ಸಾಧನೆಗೈದ ಹಾಗೂ ಬಿಜೆಪಿ ಪಕ್ಷವನ್ನು ಇಂದು ಆಡಳಿತ ಚುಕ್ಕಾಣಿಯವರೆಗೂ ತರಲು ಶ್ರಮಿಸಿದ ಲಾಲ್ಕೃಷ್ಣ ಅಡ್ವಾಣಿ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಣೆ ಮಾಡಿದ್ದಾರೆ.
‘‘ಎಲ್.ಕೆ. ಅಡ್ವಾಣಿ ಜೀ ಅವರಿಗೆ ಭಾರತ ರತ್ನ ನೀಡುವ ಬಗ್ಗೆ ಮಾಹಿತಿ ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಕೂಡ ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಅವರು ಒಬ್ಬರು. ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಸ್ಮರಣಾರ್ಹ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ಉಪಪ್ರಧಾನಿಯಾಗಿ ದೇಶಸೇವೆ ಮಾಡುವವರೆಗಿನ ಸಾರ್ಥಕ ಜೀವನ ಅವರದ್ದಾಗಿದೆ’’ ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ.
ಅಡ್ವಾಣಿ ಜೀಯವರ ದಶಕಗಳ ಸುದೀರ್ಘ ಸೇವೆಯು ಅಚಲವಾದ ಬದ್ಧತೆಯಿಂದ ಗುರುತಿಸಲ್ಪಟ್ಟಿದೆ. ಇಷ್ಟೇ ಅಲ್ಲದೆ,
ರಾಜಕೀಯ ಧುರೀಣ
ಎಲ್.ಕೆ. ಅಡ್ವಾಣಿಗೆ ಭಾರತ ರತ್ನ
(ಮೊದಲ ಪುಟದಿಂದ) ಪಾರದರ್ಶಕತೆ ಮತ್ತು ಸಮಗ್ರತೆಗೆ ಹೆಸರಾಗಿದೆ. ಅದು ರಾಜಕೀಯ ನೀತಿಶಾಸ್ತçದಲ್ಲಿ ಅನುಕರಣೀಯ ಮಾನದಂಡವನ್ನು ಹೊಂದಿಸಿದೆ. ಅವರು ರಾಷ್ಟಿçÃಯ ಏಕತೆ ಮತ್ತು ಸಾಂಸ್ಕೃತಿಕ ಪುನರುತ್ಥಾನದ ವಿಚಾರದಲ್ಲಿ ದೇಶಕ್ಕೆ ಕೊಡುಗೆ ಸಲ್ಲಿಸಲು ಅಪ್ರತಿಮ ಪ್ರಯತ್ನ ಮಾಡಿದ್ದಾರೆ. ಅವರಿಗೆ ಭಾರತರತ್ನ ಪ್ರಶಸ್ತಿ ಪ್ರದಾನ ಮಾಡುವುದು ನನ್ನ ಪಾಲಿಗೆ ಅತ್ಯಂತ ಭಾವನಾತ್ಮಕ ಕ್ಷಣ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.
೯೦ ರ ದಶಕದಲ್ಲಿ ದೇಶದಾದ್ಯಂತ ಹಮ್ಮಿಕೊಂಡಿದ್ದ ರಥಯಾತ್ರೆ ಮೂಲಕ ರಾಷ್ಟçದಾದ್ಯಂತ ಸಂಚಲನ ಮೂಡಿಸಿದ್ದ ಎಲ್ಕೆ ಅಡ್ವಾಣಿ, ಬಿಜೆಪಿಯ ಭೀಷ್ಮ ಎಂದೇ ಖ್ಯಾತರಾಗಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸಹ ಭಾರತ ರತ್ನ ಗೌರವಕ್ಕೆ ಪಾತ್ರರಾಗಿದ್ದರು. ಇದೀಗ ಅವರ ಸಮಕಾಲೀನ ರಾಜಕೀಯ ಧುರೀಣ ಅಡ್ವಾಣಿ ಅವರೂ ಭಾರತ ರತ್ನ ಪುರಸ್ಕಾರಕ್ಕೆ ಭಾಜನರಾದಂತಾಗಿದೆ.