ಸುಂಟಿಕೊಪ್ಪ, ಫೆ. ೩: ಕೊಡಗರಹಳ್ಳಿಯ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಅಭಿವೃದ್ಧಿಗಾಗಿ ದೇಣಿಗೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟç ಮತ್ತು ರಾಜ್ಯಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ, ಗೌರವಿಸಲಾಯಿತು.
ಸುಂಟಿಕೊಪ್ಪ ನಾಡು ಪ್ರೌಢಶಾಲೆಗೆ ನೂತನ ಕಟ್ಟಡ ನಿರ್ಮಿಸಲು ರೂ. ೧,೫೦,೦೦೦ ದೇಣಿಗೆಯಾಗಿ ೧೯೮೦-೮೧ನೇ ಸಾಲಿನ ವಿದ್ಯಾರ್ಥಿಗಳಾದÀ ಡಾ. ಅಕ್ಕಪಂಡ ತಮ್ಮಯ್ಯ ಅವರ ನೇತೃತ್ವದಲ್ಲಿ ಕೆ.ಡಿ. ಪ್ರಕಾಶ್, ಸುಬ್ರಮಣಿ ಪಿ.ಪಿ., ಎಫ್.ಬಿ. ಆಶೋಕ, ಕೆ.ಆರ್. ವಾಸು, ರಾಮಕೃಷ್ಣ, ಐ.ಎಸ್. ಗಣೇಶ, ವೀಣಾ ಅವರುಗಳು ಆಗಮಿಸಿ ಶಾಲಾ ಆಡಳಿತ ಮಂಡಳಿಗೆ ಹಸ್ತಾಂತರಿಸಿದರು.
ಇತ್ತೀಚೆಗೆ ನಡೆದ ರಾಜ್ಯಮಟ್ಟದ ‘ಬಾಲವಿಜ್ಞಾನ’ ಸಮಾವೇಶದಲ್ಲಿ ಭಾಗವಹಿಸಿ ರಾಷ್ಟಿçÃಯ ಮಟ್ಟದಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಪ್ರತಿನಿಧಿಸಲು ಆಯ್ಕೆಗೊಂಡಿರುವ ಬಾಲ ವಿಜ್ಞಾನಿ ಎ.ಎಸ್. ಶ್ರೀಶಾ ಮತ್ತು ಸಾಕ್ಷರತಾ ಇಲಾಖೆ ನಡೆಸಿದ ‘ಪ್ರಾಚ್ಯಪ್ರಜ್ಞೆ’ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಟಿ.ಎಸ್. ಫಾತಿವiತ್ ಸಹಲ ಇವರುಗಳನ್ನು ಸನ್ಮಾನಿಸಲಾಯಿತು.
ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ೭೫ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಕೆ.ಎಸ್. ಮಂಜುನಾಥ್ ಅವರು ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮತ್ತು ಹಳೆಯ ವಿದ್ಯಾರ್ಥಿಗಳಿಂದ ದೇಣಿಗೆಯನ್ನು ಸ್ವೀಕರಿಸಿ ಮಾತನಾಡಿದ ಅವರು, ನೂತನ ಕಟ್ಟಡ ನಿರ್ಮಾಣಕ್ಕಾಗಿ ಅಂದಾಜು ಮೌಲ್ಯ ರೂ. ೩೫ ಲಕ್ಷ ಹಣದ ಅವಶ್ಯಕತೆಯಿದ್ದು ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಹಾಗೂ ಇತರ ದಾನಿಗಳ ಸಹಾಯಹಸ್ತಕ್ಕೆ ಮನವಿ ಮಾಡಿಕೊಂಡರು.
ಈ ಸಂದರ್ಭ ಶಾಲೆಯ ಮುಖ್ಯೋಪಾಧ್ಯಾಯಿನಿ ಕೆ.ಎಸ್. ಇಂದಿರಾ, ನಿವೃತ್ತ ಮುಖ್ಯೋಪಾಧ್ಯಾಯಿನಿ ಕೆ.ಎ. ಸಾವಿತ್ರಿ ಹಾಗೂ ಶಾಲಾ ಸಹಶಿಕ್ಷಕರು ಇದ್ದರು.