ತೆರಿಗೆ ಹಂಚಿಕೆ ಕಡಿತದಿಂದ ಕರ್ನಾಟಕಕ್ಕೆ

೬೨ ಸಾವಿರ ಕೋಟಿಗೂ ಹೆಚ್ಚು ನಷ್ಟ: ಸಿಎಂ

ಬೆAಗಳೂರು: ರಾಜ್ಯದಿಂದ ೪ ಲಕ್ಷ ೩೦ ಸಾವಿರ ಕೋಟಿ ರೂ. ತೆರಿಗೆ ಸಂಗ್ರಹವಾಗುತ್ತಿದೆ. ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ೨ನೇ ಸ್ಥಾನದಲ್ಲಿದೆ. ಆದರೂ ನಮಗೆ ತೆರಿಗೆ ಹಣದಲ್ಲಿ ಮೋಸವಾಗುತ್ತಿದೆ. ತೆರಿಗೆ ಹಂಚಿಕೆ ಕಡಿತದಿಂದ ಕಳೆದ ಐದು ವರ್ಷಗಳಲ್ಲಿ ಕರ್ನಾಟಕಕ್ಕೆ ೬೨,೦೯೮ ಸಾವಿರ ಕೋಟಿಗೂ ಹೆಚ್ಚು ನಷ್ಟವಾಗಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ರಾಜ್ಯದ ಪಾಲಿನ ತೆರಿಗೆ ಹಣವನ್ನು ನೀಡದ ಕೇಂದ್ರ ಸರ್ಕಾರದ ವಿರುದ್ಧ ತಾ.೭ ರಂದು (ನಾಳೆ) ದೆಹಲಿಯ ಜಂತರ್ ಮಂತರ್‌ನಲ್ಲಿ ಧರಣಿ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಸಂಬAಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಂದು ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ನಾವು ಕೇಂದ್ರ ಸರ್ಕಾರಕ್ಕೆ ೧೦೦ ರೂ. ತೆರಿಗೆ ಕಟ್ಟಿದರೆ ನಮಗೆ ಶೇ. ೧೨-೧೩ರಷ್ಟು ವಾಪಸ್ ಬರುತ್ತಿದೆ. ಆದರೂ ಕರ್ನಾಟಕಕ್ಕೆ ಅನ್ಯಾಯವಾಗಿಲ್ಲವೆಂದು ರಾಜ್ಯ ಬಿಜೆಪಿ ನಾಯಕರು ಹೇಳುತ್ತಾರೆ.

ಕೇಂದ್ರದ ವಿರುದ್ಧ ನಾವು ಧ್ವನಿ ಎತ್ತಲೇಬೇಕಾದ ಅನಿವಾರ್ಯತೆ ಎದುರಾಗಿದೆ. ದೆಹಲಿಯಲ್ಲಿ ನಮ್ಮ ಇಡೀ ಸರ್ಕಾರ ಪ್ರತಿಭಟನೆ ಮಾಡಲಿದೆ. ಈ ಪ್ರತಿಭಟನೆಯಲ್ಲಿ ಎಲ್ಲಾ ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ. ಧರಣಿಯಲ್ಲಿ ರಾಜ್ಯದ ಎಲ್ಲಾ ಸಂಸದರು ಕೂಡ ಭಾಗಿಯಾಗಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದರು.

ಕೇಂದ್ರ ಸರ್ಕಾರದ ವಿರುದ್ಧ ಈವರೆಗೆ ರಾಜ್ಯ ಸರ್ಕಾರ ಧರಣಿ ನಡೆಸಿರಲಿಲ್ಲ. ಆದರೆ ಈಗ ಅನಿವಾರ್ಯವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೇವೆ. ಇದು ರಾಜಕೀಯ ಪ್ರೇರಿತ ಪ್ರತಿಭಟನೆಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ತಾ.೬ರಂದು (ಇಂದು) ಸಂಜೆಯೇ ದೆಹಲಿಗೆ ಹೋಗುತ್ತೇವೆ. ನಾಳೆ ಪ್ರತಿಭಟನೆ ಮಾಡುತ್ತೇವೆ. ಸಂವಿಧಾನ ಅಳವಡಿಸಿಕೊಂಡ ಬಳಿಕ ಒಕ್ಕೂಟ ವ್ಯವಸ್ಥೆ ಒಪ್ಪಿಕೊಂಡಿದ್ದೇವೆ. ರಾಜ್ಯಗಳಿಂದ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಹಣ ಹೋಗುತ್ತದೆ. ಹಣಕಾಸು ಆಯೋಗ ನಿರ್ಧರಿಸಿದಂತೆ ಈ ಹಣ ರಾಜ್ಯಗಳಿಗೆ ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು. ೧೪ನೇ ಹಣಕಾಸು ಆಯೋಗದಂತೆ ರಾಜ್ಯಕ್ಕೆ ಶೇ ೪೨ರಷ್ಟು ಹಣ ನೀಡಬೇಕು. ೧೫ನೇ ಹಣಕಾಸು ಆಯೋಗದಂತೆ ರಾಜ್ಯಕ್ಕೆ ಶೇ ೪೧ರಷ್ಟು ಹಣ ನೀಡಬೇಕು. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕವೇ ಈ ಆಯೋಗ ರಚನೆ ಆಗಿತ್ತು ಎಂದು ಸಿದ್ದರಾಮಯ್ಯ ಹೇಳಿದರು. ಬರ ಪರಿಹಾರ ಒಂದು ರೂಪಾಯಿಯೂ ಬಿಡುಗಡೆ ಆಗಿಲ್ಲ ಎಂದು ಸಿಎಂ ದೂರಿದರು.

ಯುವತಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಬೆAಗಳೂರು: ಯುವತಿ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಮಾಡಿದ ಆರೋಪದ ಮೇಲೆ ಬೀದರ್ ಮೂಲದ ಯುವಕನನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪೊಲೀಸರು ಬಂಧಿಸಿದ್ದಾರೆ.

ಬAಧಿತ ಆರೋಪಿಯನ್ನು ಬೀದರ್ ಮೂಲದ ಯುವಕ ಶಿವಕುಮಾರ್ ಹೊಸಳ್ಳಿ (೨೫) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಚಿಕ್ಕಪೇಟೆಯಲ್ಲಿ ವಾಸವಾಗಿರುವ ಶಿವಕುಮಾರ್, ಆರು ವರ್ಷದ ಹಿಂದೆ ಉಡುಪಿಯಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ಕಾರ್ಯಕ್ರಮದಲ್ಲಿ ಯುವತಿಗೆ ಪರಿಚಯವಾಗಿದ್ದು, ಬಳಿಕ ಯುವತಿ ತಾಯಿ ಬಳಿ ಮೊಬೈಲ್ ನಂಬರ್ ತೆಗೆದುಕೊಂಡು ಮೆಸೇಜ್ ಮಾಡಲು ಆರಂಭಿಸಿದ್ದಾನೆ.

೨೦೧೮ರ ಮಾರ್ಚ್ನಲ್ಲಿ ನೆಲಮಂಗಲದಲ್ಲಿರುವ ಯುವತಿ ಮನೆಗೆ ಶಿವಕುಮಾರ್ ಹೋಗಿದ್ದು, ಈ ವೇಳೆ ಯುವತಿ ಮನೆಯಲ್ಲಿ ಯಾರೂ ಇರಲಿಲ್ಲ. ಈ ಸಮಯದಲ್ಲಿ ಯುವತಿ ಮೇಲೆ ಅತ್ಯಾಚರವೆಸಗಿದ್ದಾನೆ. ಅಲ್ಲದೆ ಯುವತಿಗೆ ಗೊತ್ತಿಲ್ಲದ ಹಾಗೆ ಫೋನಿನಲ್ಲಿ ಫೋಟೋ ತೆಗೆದು, ವಿಡಿಯೋ ಮಾಡಿಕೊಂಡಿದ್ದಾನೆ. ಬಳಿಕ ಈ ಫೋಟೋ ಮತ್ತು ವಿಡಿಯೋಗಳನ್ನು ಇಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡು ವುದಾಗಿ ಬೆದರಿಸಿ, ಹಲವಾರು ಬಾರಿ ಅತ್ಯಾಚಾರವೆಸಗಿದ್ದಾನೆ. ಅಲ್ಲದೆ ಸಂತ್ರಸ್ತೆಯಿAದ ೮೫,೦೦೦ ಹಣವನ್ನು ಶಿವಕುಮಾರ್ ಪಡೆದುಕೊಂಡಿದ್ದಾನೆ. ಕಳೆದ ಜನವರಿ ೩೦ ರಂದು ಸಂತ್ರಸ್ತೆ ಮತ್ತು ಅವರ ತಂದೆ-ತಾಯಿ ಎಲ್ಲರೂ ನೆಲಮಂಗಲದ ಗಣೇಶನ ಗುಡಿ ದೇವಸ್ಥಾನಕ್ಕೆ ಹೋದಾಗ, ಶಿವಕುಮಾರ್ ಸಂತ್ರಸ್ತೆಗೆ ಕರೆ ಮಾಡಿ ಬಲವಂತವಾಗಿ ಪೀಡಿಸಿದ್ದಾನೆ. ಈ ವಿಚಾರವನ್ನು ಸಂತ್ರಸ್ತೆ ತಂದೆ, ತಾಯಿಗೆ ತಿಳಿಸಿದ್ದು, ನಂತರ ಈ ಬಗ್ಗೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

ನೈತಿಕ ಪೊಲೀಸ್ ಗಿರಿ: ಮೂವರ ವಶ

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದಲ್ಲಿರುವ ಪಣಂಬೂರು ಬೀಚ್‌ನಲ್ಲಿ ನೈತಿಕ ಪೊಲೀಸ್‌ಗಿರಿ ಮತ್ತು ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬAಧಿಸಿದAತೆ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ಮೂಲಗಳ ಪ್ರಕಾರ ಮಂಗಳೂರು ನಗರದ ಹೊರವಲಯದ ಪಣಂಬೂರು ಬೀಚ್‌ನಲ್ಲಿ ಈ ಘಟನೆ ನಡೆದಿದ್ದು, ಕೇರಳ ಮೂಲದ ಪುರುಷ ಮತ್ತು ಬೆಂಗಳೂರು ಮೂಲದ ಮಹಿಳೆ ದಂಪತಿಗಳಾಗಿದ್ದು, ಪಣಂಬೂರು ಬೀಚ್‌ನಲ್ಲಿ ತಿರುಗಾಡುತ್ತಿದ್ದಾಗ ಬಲಪಂಥೀಯ ಸಂಘಟನೆ ಕಾರ್ಯಕರ್ತರು ಅಡ್ಡಗಟ್ಟಿದ್ದಾರೆ. ಇಬ್ಬರೂ ಬೇರೆ ಬೇರೆ ಧರ್ಮಗಳಿಗೆ ಸೇರಿದವರಾಗಿದ್ದು ಏಕೆ ಒಟ್ಟಿಗೆ ಇದ್ದಾರೆ ಎಂದು ಪ್ರಶ್ನಿಸಿದ್ದಾರೆ. ಈ ವಿಚಾರ ತಿಳಿದ ಕೂಡಲೇ ಪಣಂಬೂರು ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಮಾನಸಿಕ ಕಿರುಕುಳ ನೀಡಿದ್ದ ಅಧಿಕಾರಿ ಬಂಧನ

ಬೆAಗಳೂರು: ಸಹೋದ್ಯೋಗಿಯೊಬ್ಬರ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಕನಕಪುರ ತಾಲೂಕು ಕಚೇರಿಯ ಚುನಾವಣಾ ಶಾಖೆಯ ಶಿರಸ್ತೇದಾರ್ ಅವರನ್ನು ಕನಕಪುರ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಪೂರ್ಣಿಮಾ (೫೦) ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಮತ್ತು ಸಂಬAಧಪಟ್ಟ ಇಲಾಖೆಯಿಂದ ಅಮಾನತುಗೊಳಿಸಲಾಗಿದೆ. ಟಿಡಿಸಿ ಕಾರ್ಯಕರ್ತ ಟಿಎನ್ ಸುರೇಶ್ (೫೪) ಕಳೆದ ಎಂಟು ವರ್ಷಗಳಿಂದ ಚುನಾವಣಾ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದು, ಚುನಾವಣಾ ಶಾಖೆಯ ಕೊಠಡಿಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಸಂಜೆ ೪.೪೦ರ ಸುಮಾರಿಗೆ ಘಟನೆ ಬೆಳಕಿಗೆ ಬಂದಿತ್ತು. ವಕೀಲ ಪಾಪಣ್ಣ ರಸ್ತೆ ನಿವಾಸಿ ಸುರೇಶ್ ಅವರ ಪತ್ನಿ ಆರ್ ರೇಖಾ (೪೩) ಅವರು ಪೂರ್ಣಿಮಾ ವಿರುದ್ಧ ದೂರು ದಾಖಲಿಸಿದ್ದರು. ಪೂರ್ಣಿಮಾ ಅವರು ನೀಡಿದ ಮಾನಸಿಕ ಕಿರುಕುಳದಿಂದ ತನ್ನ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದರು. ತನ್ನ ಪತಿಯನ್ನು ಕೆಲಸದಿಂದ ವಜಾಗೊಳಿಸುವ ಬೆದರಿಕೆಯ ನೋಟಿಸ್‌ನ ಬಗ್ಗೆಯೂ ಅವರು ಪ್ರಸ್ತಾಪಿಸಿದ್ದು, ಸುರೇಶ್ ಅವರ ಸಾವಿಗೆ ಶಿರಸ್ತೇದಾರ್ ಕಾರಣ ಎಂದು ಡೆತ್ ನೋಟ್ ಬರೆದಿದ್ದಾರೆ ಎಂದು ಹೇಳಲಾಗಿದೆ.