ಪೊನ್ನಂಪೇಟೆ, ಫೆ. ೫ : ಕೊಡವ ದೀನ ಬಂಧು ಚಾರಿಟೇಬಲ್ ಟ್ರಸ್ಟ್ ಮೈಸೂರು ವತಿಯಿಂದ ಗೋಣಿಕೊಪ್ಪಲು ಕಾವೇರಿ ಪದವಿ ಕಾಲೇಜು, ಕಾವೇರಿ ಪದವಿ ಪೂರ್ವ ಕಾಲೇಜಿನ ಆರ್ಥಿಕವಾಗಿ ಹಿಂದುಳಿದ ಕೊಡವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಪದವಿ ವಿದ್ಯಾರ್ಥಿಗಳಿಗೆ ತಲಾ ರೂ. ೭೦೦೦, ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ತಲಾ ರೂ. ೪೦೦೦ ರಂತೆ ಒಟ್ಟು ೧೧೫ ವಿದ್ಯಾರ್ಥಿಗಳಿಗೆ ರೂ. ೬,೭೧,೦೦೦ ರೂಪಾಯಿ ಮೊತ್ತವನ್ನು ವಿತರಿಸಲಾಯಿತು.

ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಸಭಾಂಗಣದಲ್ಲಿ ನಡೆದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮದಲ್ಲಿ ಕೊಡವ ದೀನ ಬಂಧು ಚಾರಿಟೇಬಲ್ ಟ್ರಸ್ಟ್ ನ ಗೌರವ ಕಾರ್ಯದರ್ಶಿ ಪಟ್ಟಡ ಜಯಕುಮಾರ್ ಮಾತನಾಡಿ ಆರ್ಥಿಕವಾಗಿ ಹಿಂದುಳಿದ ಕೊಡವ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಟ್ರಸ್ಟ್ನ ವತಿಯಿಂದ ಪ್ರತಿ ವರ್ಷ ಧನ ಸಹಾಯ ಮಾಡಲಾಗುತ್ತಿದೆ. ಈ ಹಣವನ್ನು ತಮ್ಮ ಓದಿಗೆ ಪೂರಕವಾಗಿ ಉಪಯೋಗಿಸಿಕೊಳ್ಳಬೇಕು. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ವಿದ್ಯಾರ್ಜನೆಯಲ್ಲಿ ತೊಡಗಿಕೊಳ್ಳುವ ಮೂಲಕ ಸಮಾಜದಲ್ಲಿ ಉತ್ತಮ ಹೆಸರು ಸಂಪಾದಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದ ಗೋಣಿಕೊಪ್ಪಲು ಕಾವೇರಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಹಾಗೂ

(ಮೊದಲ ಪುಟದಿಂದ) ನಿವೃತ್ತ ಪ್ರಾಂಶುಪಾಲ ಪ್ರೊ.ಇಟ್ಟೀರ ಕೆ. ಬಿದ್ದಪ್ಪ ಮಾತನಾಡಿ ಕೊಡವ ದೀನ ಬಂಧು ಚಾರಿ ಟೇಬಲ್ ಟ್ರಸ್ಟ್ ನಿಂದ ನೀಡುವ ವಿದ್ಯಾರ್ಥಿ ವೇತನ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಲಿದೆ.

ಈ ಟ್ರಸ್ಟ್ನಿಂದ ಸಹಾಯ ಪಡೆದ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮುಗಿಸಿ ತಾವು ಉದ್ಯೋಗಕ್ಕೆ ಸೇರಿದ ನಂತರ ಟ್ರಸ್ಟ್ಗೆ ಧನ ಸಹಾಯ ಮಾಡಿದರೆ, ಮತ್ತಷ್ಟು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲು ಸಾಧ್ಯವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಕೊಡವ ದೀನ ಬಂಧು ಚಾರಿಟೇಬಲ್ ಟ್ರಸ್ಟ್ನ ಖಜಾಂಚಿ ಹಾಗೂ ಟ್ರಸ್ಟಿ ಚಂಬಾAಡ ಸೋಮಣ್ಣ, ಟ್ರಸ್ಟಿ ನಿವೃತ್ತ ವಿಂಗ್ ಕಮಾಂಡರ್ ಚೇಂದ್ರಿಮಾಡ ಜಿ.ಮಾದಪ್ಪ, ಟ್ರಸ್ಟಿ ಕಳ್ಳಿಚಂಡ ಮುದ್ದುರಾಜು, ಕಾವೇರಿ ಪದವಿ ಕಾಲೇಜು ಪ್ರಾಂಶುಪಾಲ ಡಾ. ಮಾಳೇಟಿರ ಬಿ. ಕಾವೇರಪ್ಪ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸಣ್ಣುವಂಡ ಎಸ್. ಮಾದಯ್ಯ, ಉಪನ್ಯಾಸಕರಾದ ಡಾ.ಮುಲ್ಲೇಂಗಡ ರೇವತಿ ಪೂವಯ್ಯ, ಕೊಟ್ಟಂಗಡ ವಿಪ್ರ ನೀಲಮ್ಮ ಹಾಜರಿದ್ದರು.