ಮಡಿಕೇರಿ, ಫೆ. ೫: ಸಿದ್ದಾಪುರದ ಬಿ.ಜಿ.ಎಸ್. ಪಿ.ಯು ಕಾಲೇಜಿನಲ್ಲಿ ದ್ವಿತೀಯ ಪಿ.ಯು. ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಕಾರ್ಯಕ್ರಮವನ್ನು ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ಎನ್.ಕೆ. ಮೆಹಬೂಬ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ತಂದೆ ತಾಯಿಯನ್ನು ಪ್ರೀತಿಸುವ ಮೂಲಕ ನಿರ್ದಿಷ್ಟ ಗುರಿಯೊಂದಿಗೆ ಓದಿನತ್ತ ಗಮನ ಹರಿಸಿದರೆ ಯಶಸ್ಸು ಸಾಧಿಸಬಹುದು. ಆ ಮೂಲಕ ಸಮಾಜದಲ್ಲಿ ಗುರುತಿಸಿಕೊಳ್ಳಬಹುದು ಎಂದು ಕಿವಿಮಾತು ಹೇಳಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ‘ಶಕ್ತಿ’ ಉಪಸಂಪಾದಕ ಉಜ್ವಲ್ ರಂಜಿತ್ ಮಾತನಾಡಿ, ವಿದ್ಯೆಯೊಂದೆ ಮುಖ್ಯವಲ್ಲ; ಪತ್ರಿಕೆಗಳನ್ನು ಓದುವ ಮೂಲಕ ಸಾಮಾನ್ಯ ಜ್ಞಾನವನ್ನು ವೃದ್ಧಿಸಿಕೊಂಡು ಆತ್ಮ ವಿಶ್ವಾಸದೊಂದಿಗೆ ಮುನ್ನಡೆದರೆ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂದು ಸಲಹೆಯಿತ್ತರು.

ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಕಾಳೇಗೌಡ ಅವರು ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಒತ್ತು ನೀಡಿ ಉತ್ತಮ ಅಂಕದೊAದಿಗೆ ತೇರ್ಗಡೆ ಹೊಂದಿ ಕಾಲೇಜಿಗೆ ಒಳ್ಳೆಯ ಹೆಸರನ್ನು ತಂದುಕೊಡಬೇಕೆAದು ನುಡಿದರು.

ವೇದಿಕೆಯಲ್ಲಿ ಬಿಜಿಎಸ್ ಪಬ್ಲಿಕ್ ಶಾಲೆಯ ಮುಖ್ಯೋಪಾಧ್ಯಾಯರಾದ ಅನಿತಾ, ಸಂಯೋಜಕರಾದ ಲಸಿಕಾ, ಬಿಜಿಎಸ್ ಶಾಲೆಯ ವ್ಯವಸ್ಥಾಪಕರಾದ ಮಂಜುನಾಥ್ ಉಪಸ್ಥಿತರಿದ್ದರು. ಪಠ್ಯ ಚಟುವಟಿಕೆ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳಾದ ದೀಪ್ತಿ, ನವ್ಯ, ಪ್ರಾರ್ಥನಾ ನೃತ್ಯ ಪ್ರದರ್ಶಿಸಿದರು. ಉಪನ್ಯಾಸಕರುಗಳಾದ ಪಿ.ಎ. ಅಶ್ವಿನಿ ನಿರೂಪಿಸಿ, ರಮ್ಯ ಸ್ವಾಗತಿಸಿ, ಶಿಲ್ಪ ವಂದಿಸಿದರು.