ಕೂಡಿಗೆ, ಫೆ. ೪: ಇಲ್ಲಿಗೆ ಸಮೀಪದ ಕೂಡಿಗೆ ಕೊಪ್ಪಲು ಗ್ರಾಮದ ಯುವಕ ನೇಣಿಗೆ ಶರಣಾದ ಘಟನೆ ನಡೆದಿದೆ.

ಕೆ.ಟಿ. ಕೃಷ್ಣ ಎಂಬವರ ಮಗ ಚಂದನ್(೨೪) ಮೃತ ದುರ್ದೈವಿ. ನಿನ್ನೆ ರಾತ್ರಿ ಕೋಣೆಗೆ ತೆರಳಿದ ಚಂದನ್ ಬೆಳಿಗ್ಗೆ ಬಾಗಿಲು ತೆರೆಯದಿದ್ದಾಗ ಮನೆಯವರು ಬಾಗಿಲು ತೆಗೆದು ನೋಡಿದಾಗ ರೂಂನ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬAಧಿಸಿದAತೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಮಹಜರು ನಡೆಸಿ ಪ್ರಕರಣ ದಾಖಲಿಸಿಕೊಂಡಿ ದ್ದಾರೆ. ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ನಂತರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿತು. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.