ಶನಿವಾರಸಂತೆ, ಫೆ. ೪: ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಸ್ತಬ್ಧಚಿತ್ರ ಮೆರವಣಿಗೆ ತಾ. ೫ ರಂದು (ಇಂದು) ಸಂಜೆ ೪.೩೦ಕ್ಕೆ ಶನಿವಾರಸಂತೆಗೆ ಆಗಮಿಸಲಿದೆ. ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಪಂಚಾಯಿತಿ ಅಧ್ಯಕ್ಷೆ ಗೀತಾ ಹರೀಶ್ ಹಾಗೂ ನೋಡೆಲ್ ಅಧಿಕಾರಿ ಸೋಮವಾರಪೇಟೆ ತೋಟಗಾರಿಕಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ್ ಶೆಟ್ಟಿ ಅವರ ಸಮ್ಮುಖದಲ್ಲಿ ಸ್ವಾಗತಿಸಿ ಪುಷ್ಪಾರ್ಚನೆ ಮಾಡಲಾಗುವುದು. ನಂತರ ಮುಖ್ಯರಸ್ತೆಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದವರೆಗೆ ಮೆರವಣಿಗೆಯಲ್ಲಿ ಸಾಗಿ ಅಲ್ಲಿ ಸಭೆ ನಡೆಯಲಿದೆ.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿದ್ದೇಗೌಡ ಪೀಠಿಕೆ ಓದುತ್ತಾರೆ. ಬಹುಮಾನ ವಿತರಣೆ, ಭಾಷಣ ಇತರೆ ಕಾರ್ಯಕ್ರಮಗಳಿರುತ್ತವೆ ಎಂದು ಗ್ರಾಮ ಪಂಚಾಯಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ದುಂಡಳ್ಳಿ: ಸಮೀಪದ ದುಂಡಳ್ಳಿ ಗ್ರಾಮ ಪಂಚಾಯಿತಿಗೆ ಸಂವಿಧಾನ ದಿನಾಚಾರಣೆ ಪ್ರಯುಕ್ತ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆ ತಾ. ೬ ರಂದು ಬೆಳಿಗ್ಗೆ ೯ ಗಂಟೆಗೆ ಆಗಮಿಸುತ್ತದೆ. ನಂತರ ಕಾರ್ಯಕ್ರಮ ನಡೆಯಲಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಯಿಷಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.