ವೀರಾಜಪೇಟೆ, ಫೆ. ೬: ಗಾಂಜಾ ಗಿಡ ಬೆಳೆದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ ತೆಲುಗರ ಬೀದಿ ನಿವಾಸಿ ಅಭಿಶೇಕ್ (೨೫) ಬಂಧಿತ ಆರೋಪಿ.

ಆರೋಪಿ ಅಭಿಶೇಕ್ ಕ್ಯಾಟರಿಂಗ್‌ನಲ್ಲಿ ಸಹಾಯಕನಾಗಿ ದುಡಿಯುತ್ತಿದ್ದು ತನ್ನ ಮನೆಯ ಮುಂಭಾಗದ ಪ್ಲಾಸ್ಟಿಕ್ ತೊಟ್ಟಿಯೊಂದರಲ್ಲಿ ಗಾಂಜಾ ಗಿಡ ಬೆಳೆಸಿದ್ದಾನೆ. ಸುಮಾರು ೫ ಅಡಿ ಎತ್ತರಕ್ಕೆ ಬೆಳೆದ ಗಿಡ ಬಗ್ಗೆ ಪೊಲೀಸರಿಗೆ ಮಾಹಿತಿ ತಿಳಿದು ಬಂದಿದೆ. ಇಂದು ಬೆಳಿಗ್ಗೆ ದಾಳಿ ನಡೆಸಿದ ನಗರ ಠಾಣೆಯ ಠಾಣಾಧಿಕಾರಿ ರವೀಂದ್ರ ಮತ್ತು ಸಿಬ್ಬಂದಿಗಳು ಗಾಂಜಾ ಗಿಡದೊಂದಿಗೆ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯ ಮೇಲೆ ವೀರಾಜಪೇಟೆ ನಗರ ಠಾಣೆಯಲ್ಲಿ ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿಕೊಂಡು ಆರೋಪಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಆದೇಶ ಮಾಡಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. -ಕಿಶೋರ್ ಕುಮಾರ್ ಶೆಟ್ಟಿ