ಚೆಯ್ಯಂಡಾಣೆ, ಫೆ. ೫: ಸ್ಥಳೀಯ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಲಜೀವನ್ ಮಿಷನ್ (ಜೆಜೆಎಂ) ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಚೆಸ್ಕಾಂ ನಿರ್ಲಕ್ಷö್ಯದಿಂದ ನೀರು ದೊರೆಯುತ್ತಿಲ್ಲ ಎಂದು ಗ್ರಾಮ ಪಂಚಾಯಿತಿ ಹಿಂದಿನ ಅಧ್ಯಕ್ಷ ರಾಜೇಶ್ ಅಚ್ಚಯ್ಯ ಆರೋಪಿಸಿದ್ದು, ಲೋಕಾಯುಕ್ತಕ್ಕೆ ದೂರು ನೀಡಲು ಮುಂದಾಗಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜೆಜೆಎಂ ಕಾಮಗಾರಿ ಬಹುತೇಕ ಪೂರ್ಣ ಗೊಂಡಿದ್ದು ಟ್ರಾನ್ಸಾ÷್ಫರ್ಮರ್ ಅಳವಡಿಸಿದ್ದು, ಮೀಟರ್ ಕೂಡ ಅಳವಡಿಸಲಾಗಿದೆ. ಆದರೆ ಚೆಸ್ಕಾಂ ನಿರ್ಲಕ್ಷö್ಯ ತೋರಿ ಪವರ್ ಸಪ್ಲೆöÊ ಮಾತ್ರ ನೀಡುತ್ತಿಲ್ಲ. ಈ ಬಗ್ಗೆ ಶಾಸಕರ ಗಮನಕ್ಕೆ ತಂದ ಸಂದರ್ಭ ಕೂಡಲೇ ಚೆಸ್ಕಾಂ ಇಲಾಖೆಗೆ ಕ್ರಮ ಕೈಗೊಳ್ಳಲು ಶಾಸಕರು ತಿಳಿಸಿದ್ದರು. ಆದರೂ ಇದು ವರೆಗೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಂಚಾಯಿತಿ ವ್ಯಾಪ್ತಿಯ ತಟ್ಟಮಕ್ಕಿ ಪೈಸಾರಿಗೆ ೧೫ ದಿನದಿಂದ ನೀರಿಲ್ಲದೆ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಿಂದ ಗ್ರಾಮ ಪಂಚಾಯಿತಿ ಸದಸ್ಯನಾದ ತಾನು ಲೋಕಾಯುಕ್ತಕ್ಕೆ ದೂರು ನೀಡಲು ಮುಂದಾಗಿದ್ದೇನೆ ಎಂದರು. ಅಶ್ರಫ್