ಕೂಡಿಗೆ, ಫೆ. ೬: ಹಾಸನ ಹೆದ್ದಾರಿಯ ಹೆಬ್ಬಾಲೆ ಮುಖ್ಯ ರಸ್ತೆಯ ಬದಿಯಲ್ಲಿ ಭೈರಪ್ಪಗುಡಿ ಗ್ರಾಮದಲ್ಲಿ ಶುಂಠಿ ಕೆಲಸಕ್ಕೆ ಬಂದ ಮಂಗಳೂರು ಮೂಲದ ವ್ಯಕ್ತಿಯ ಮೃತ ದೇಹ ಪತ್ತೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ತೊಕೂರು ಗ್ರಾಮದ ವಿಕ್ಟರ್ ಫೆಲಿಕ್ಸ್ ಡಿಸೋಜ (೬೮) ಮೃತ ದುರ್ದೈವಿ. ಹೆಬ್ಬಾಲೆ ಮುಖ್ಯ ರಸ್ತೆಯಲ್ಲಿ ಕಳೆದ ರಾತ್ರಿ ವಾಹನ ಡಿಕ್ಕಿ ಹೊಡೆದುಕೊಂಡು ಹೋದ ಪರಿಣಾಮವಾಗಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಕುಶಾಲನಗರದ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳ ತಂಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಮೃತ ದೇಹವನ್ನು ಕುಶಾಲನಗರದ ಶವಗಾರದಲ್ಲಿ ಇರಿಸಲಾಗಿದೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.