ಮಡಿಕೇರಿ, ಫೆ. ೫ : ಲ್ಯಾಂಪ್ಸ್ ಅಕಾಡೆಮಿ ತಿತಿಮತಿಯಲ್ಲಿ ಶಾಲಾ ವಾರ್ಷಿಕೋತ್ಸವವನ್ನು ವಿಜೃಂಭಣೆಯಿAದ ಆಚರಿಸಲಾಯಿತು. ೨೦೨೩-೨೪ನೇ ಸಾಲಿನ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಏಷ್ಯಾ ಖಂಡದ ಬಗ್ಗೆ ತಿಳಿಸಿಕೊಡುವ ಪ್ರಯತ್ನ ಮಾಡಲಾಗಿತ್ತು. ನೃತ್ಯ ಪ್ರದರ್ಶನದ ಮೂಲಕ ಮಕ್ಕಳು ಬೇರೆ ಬೇರೆ ದೇಶಗಳ ಸಾಂಪ್ರದಾಯಿಕ ನೃತ್ಯವನ್ನು ಪರಿಚಯಿಸಿದರು. ವಿದ್ಯಾರ್ಥಿಗಳ ವಸ್ತç ಮತ್ತು ನೃತ್ಯ ವೈವಿಧ್ಯಮಯವಾಗಿತ್ತು. ಮುಖ್ಯ ಅತಿಥಿಯಾಗಿ ಗೋಣಿಕೊಪ್ಪ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ರೂಪದೇವಿ ಬಿ.ಎಸ್ ಆಗಮಿಸಿದ್ದರು. ವಿದ್ಯಾರ್ಥಿಗಳು ಕೆಟ್ಟ ಚಟಗಳಿಗೆ ಬಲಿಯಾಗಬಾರದು. ಮೊಬೈಲ್ ಬಳಕೆ ಮಾಡಬಾರದು ಎಂದು ಅವರು ಬುದ್ದಿಮಾತನ್ನು ಹೇಳಿದರು.
ವೇದಿಕೆಯಲ್ಲಿ ಶಾಲೆಯ ಆಡಳಿತ ಮಂಡಳಿಯ ಸಂಸ್ಥಾಪಕರು ಮತ್ತು ಅಧ್ಯಕ್ಷರಾದ ಪಿ.ವಿ. ಶಬರೀಶ್, ಕಾರ್ಯದರ್ಶಿ ಸುಮನ್ ಎಂ.ಆರ್., ಟ್ರಸ್ಟಿ ವಿಕ್ರಮ್ ಎಂ.ಆರ್. ಮತ್ತು ಶಾಲೆಯ ಮುಖ್ಯೋಪಾಧ್ಯಾಯರು ಅಪೋಲಿನ್ ಡಿಸೋಜಾ ಉಪಸ್ಥಿತರಿದ್ದರು. ಶಾಲಾ ಶಿಕ್ಷಕವೃಂದದವರು, ವಿದ್ಯಾರ್ಥಿಗಳು ಪೋಷಕರು ಮತ್ತು ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.