ಸುಂಟಿಕೊಪ್ಪ, ಫೆ. ೭: ಇಲ್ಲಿನ ಜೆಸಿಐ ಸಂಸ್ಥೆ ವತಿಯಿಂದ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಕಾನೂನು ಮಾಹಿತಿ ಕಾರ್ಯಕ್ರಮ ಪೊಲೀಸ್ ಇಲಾಖೆಯಿಂದ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುಶಾಲನಗರ ಡಿವೈಎಎಸ್‌ಪಿ ಗಂಗಾಧರಪ್ಪ ಮಾತನಾಡಿ, ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವ ಕುರಿತು ಮಾಹಿತಿ ನೀಡಿದರು. ಪ್ರತಿಯೊಬ್ಬರೂ ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಅಪಘಾತಗಳನ್ನು ತಡೆಗಟ್ಟಬೇಕು. ರಸ್ತೆ ಸಂಚಾರ ನಿಯಮವನ್ನು ಸರಿಯಾಗಿ ಪಾಲಿಸದಿದ್ದಾಗ ರಸ್ತೆ ಅಪಘಾತ ಸಂಭವಿಸುತ್ತದೆ. ರಸ್ತೆ ಅಪಘಾತದಲ್ಲಿ ಅಧಿಕ ಮಂದಿ ಮೃತಪಟ್ಟಿದ್ದಾರೆ. ಅಪಘಾತ ತಡೆÀಗಟ್ಟುವ ನಿಟ್ಟಿನಲ್ಲಿ ಸಾರಿಗೆ ಮತ್ತು ಪೊಲೀಸ್ ಇಲಾಖೆ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ಪ್ರತಿಯೊಬ್ಬರೂ ಕೂಡ ಕಾನೂನನ್ನು ಪರಿಪಾಲಿಸುವ ಮೂಲಕ ವಾಹನ ಸಂಚಾರ ಮಾಡುವಾಗ ಹೆಚ್ಚಿನ ಜಾಗ್ರತೆ ವಹಿಸಬೇಕು ಎಂದು ಕರೆ ನೀಡಿದರು.

ದ್ವಿಚಕ್ರ ವಾಹನ ಚಾಲಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ವಾಹನ ಚಾಲನೆ ಮಾಡುವ ವೇಳೆ ಮೊಬೈಲ್‌ನಲ್ಲಿ ಮಾತನಾಡಬಾರದು. ಕಾರು ಚಾಲಕರು ಸೀಟು ಬೆಲ್ಟ್ ಧರಿಸಬೇಕು.

ವಿದ್ಯಾರ್ಥಿಗಳು ಶಿಸ್ತು ಸಂಯಮ ದಿಂದ ಶಿಕ್ಷಣ ಪಡೆಯಬೇಕೆ ವಿನಃ ಯಾವುದೇ ದುಶ್ಚಟಗಳಿಗೆ ಬಲಿಯಾಗ ಬಾರದು, ಸಮಾಜದಲ್ಲಿ ಕಾನೂನು ಪಾಲಿಸದ ಯುವಕರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು ತುರ್ತು ಸಂದರ್ಭ ಪೊಲೀಸ್ ಇಲಾಖೆ ಯಿಂದ ನೀಡಲಾದ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಎಂದು ಮಾಹಿತಿ ನೀಡಿದರು. ಸುಂಟಿಕೊಪ್ಪ ಠಾಣಾಧಿಕಾರಿ ಶ್ರೀಧರ್, ಜೆಸಿಐ ಅಧ್ಯಕ್ಷ ಸಂಪತ್‌ಕುಮಾರ್, ಸದಸ್ಯ ರಾದ ದೇವಿಪ್ರಸಾದ್ ಕಾರ‍್ಮಾರ್, ಡೆನ್ನಿಸ್ ಡಿಸೋಜ, ಪೆಲ್ಸಿ ಡಿಸೋಜ, ಅರುಣ್‌ಕುಮಾರ್, ಸತೀಶ್‌ಕುಮಾರ್, ಪ್ರನೀತ್ ಉಪಸ್ಥಿತರಿದ್ದರು.