ಮಡಿಕೇರಿ, ಫೆ. ೭: ದಕ್ಷಿಣ ಕನ್ನಡ-ಕೊಡಗು ಜಿಲ್ಲೆಗಳ ಸಂಪರ್ಕ
ಕಲ್ಪಿಸುವ ಗಾಳಿಬೀಡು-ಕಡಮಕಲ್ಲು- ಸುಬ್ರಹ್ಮಣ್ಯ ರಸ್ತೆ ಅಭಿವೃದ್ಧಿಗೆ ವಿಶೇಷ ಗಮನ ನೀಡಲಾಗುವುದು ಎಂದು ರಾಜ್ಯ ಅರಣ್ಯ ಪರಿಸರ ಮತ್ತು ಜೀವಶಾಸ್ತç ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ
ಅವರು ಕಾನೂನು ರೀತಿಯಲ್ಲಿ ಪರಿಶೀಲನೆ ನಡೆಸಿ ರಸ್ತೆ ಅಭಿವೃದ್ಧಿಪಡಿಸಲು ಎಲ್ಲಾ ರೀತಿಯ ಪ್ರಯತ್ನ ನಡೆಸಲಾಗುವುದು ಎಂದರು. ರಾಜ್ಯದ ಚಾರಣ ತಾಣಗಳಲ್ಲಿ ಜನ ಜಂಗುಳಿ ತಪ್ಪಿಸಲು ಹಾಗೂ ನಿಯಂತ್ರಿಸಲು ಆನ್ಲೈನ್ ಮೂಲಕ
(ಮೊದಲ ಪುಟದಿಂದ) ನೋಂದಾಯಿಸಲು ವ್ಯವಸ್ಥೆ ಮಾಡಲಾಗುವುದು. ಹಲವಾರು ಕಡೆ ಅರಣ್ಯ, ಕಂದಾಯ ಮತ್ತು ಪಟ್ಟಾ ಜಮೀನುದಾರ ಭೂಮಿಯ ಮಾಲೀಕತ್ವದ ಬಗ್ಗೆ ವಿವಾದವಿದೆ. ಈ ಹಿನ್ನೆಲೆಯಲ್ಲಿ ಕಂದಾಯ ಮತ್ತು ಅರಣ್ಯ ಇಲಾಖೆಗಳ ಜಂಟಿ ಸರ್ವೆ ನಡೆಸುವ ಬಗ್ಗೆ ತೀರ್ಮಾನಿಸಲಾಗಿದೆ. ಅಗತ್ಯವಿರುವ ರಾಜ್ಯದ ಎಲ್ಲಾ ಕಡೆ ಈ ರೀತಿಯ ಸರ್ವೆ ನಡೆಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.
೩ ಎಕರೆಗಳಿಗಿಂತ ಕಡಿಮೆ ಪ್ರದೇಶದಲ್ಲಿ ಹಲವಾರು ವರ್ಷಗಳಿಂದ ವಾಸಮಾಡುತ್ತಾ ಇರುವ ಬುಡಕಟ್ಟು ಹಾಗೂ ಅರಣ್ಯ ವಾಸಿಗಳ ಒತ್ತುವರಿಯನ್ನು ತೆರವುಗೊಳಿಸದೆ ಅವರಿಗೆ ತೊಂದರೆಯಾಗದAತೆ ಅರಣ್ಯ ಸಂರಕ್ಷಣೆಗೆ ಒತ್ತು ನೀಡಲಾಗುವುದು. ೯೪ಸಿ ಅರ್ಜಿದಾರರ ಅರ್ಜಿಗಳ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ಗಾಳಿಬೀಡು-ಕಡಮಕಲ್ಲು-ಸುಬ್ರಹ್ಮಣ್ಯ
ರಸ್ತೆ ಅಭಿವೃದ್ಧಿಗೆ ಒತ್ತು