ವೀರಾಜಪೇಟೆ, ಫೆ. ೭: ತಾಲೂಕಿನ ಬೇಟೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ನೀರಿನ ಟ್ಯಾಂಕ್ ಕಾಮಗಾರಿ ಕಳಪೆ ಗುಣಮಟ್ಟದಲ್ಲಿ ಕೂಡಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ವೀರಾಜಪೇಟೆ, ಫೆ. ೭: ತಾಲೂಕಿನ ಬೇಟೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ನೀರಿನ ಟ್ಯಾಂಕ್ ಕಾಮಗಾರಿ ಕಳಪೆ ಗುಣಮಟ್ಟದಲ್ಲಿ ಕೂಡಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಲೀಟರ್ ಸಾಮರ್ಥ್ಯದ ಟ್ಯಾಂಕ್ ನಿರ್ಮಾಣಕ್ಕೆ ಬಳಸುತ್ತಿರುವ ಸಾಮಗ್ರಿಗಳು ಕಳಪೆ ಗುಣಮಟ್ಟ ದಾಗಿದೆ. ಕೇಂದ್ರ ಸರ್ಕಾರ ಗ್ರಾಮೀಣ ಭಾಗದ ಪ್ರತಿಯೊಂದು ಮನೆಗೆ ನಲ್ಲಿಯ ಮೂಲಕ ಕುಡಿಯುವ ನೀರು ಪೂರೈಸುವ ನಿಟ್ಟಿನಲ್ಲಿ ರೂಪಿಸಿದ ಯೋಜನೆ ಹಳಿ ತಪ್ಪುತ್ತಿದೆ ಎಂದು ಆರೋಪಿಸಿರುವ ಗ್ರಾಮಸ್ಥರು ಟ್ಯಾಂಕ್ ನಿರ್ಮಾಣದಲ್ಲಿ ತುಕ್ಕು ಹಿಡಿದ ಕಬ್ಬಿಣ ಬಳಕೆ ಮಾಡಲಾಗುತ್ತಿದೆ. ಇದರಿಂದ ಮುಂದೆ ಅನಾಹುತಗಳೇ ಹೆಚ್ಚು. ಶಾಲೆಯ ಆವರಣದಲ್ಲಿ ಟ್ಯಾಂಕ್ ನಿರ್ಮಾಣ ವಾಗುತ್ತಿರುವುದರಿಂದ ಶಾಲಾ ಮಕ್ಕಳಿಗೆ ಭವಿಷ್ಯದಲ್ಲಿ ತೊಂದರೆಗಳಾಗಬಹುದು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಟ್ಯಾಂಕ್ ನಿರ್ಮಾಣಕ್ಕೆ ಮೂವರು ಗುತ್ತಿಗೆದಾರರಾಗಿದ್ದಾರೆ. ಎಲ್ಲಾ ಕಾಮಗಾರಿಗಳಿಗೆ ನಿಗದಿತ ಸಮಯ ಕಾಲಮಿತಿ ಇರುತ್ತದೆ. ಕಾಮಗಾರಿ ಆರಂಭಗೊಳ್ಳುವ ಮುನ್ನ ಕಾಮಗಾರಿಗಳ ಸಂಪೂರ್ಣವಾದ ಮಾಹಿತಿ ಫಲಕ ಅಳವಡಿಸಿ ಗ್ರಾಮಸ್ಥರಿಗೆ ಮಾಹಿತಿ ನೀಡಬೇಕು. ಆದರೆ, ಫಲಕ ಅಳವಡಿಸಿಲ್ಲ.

ಹಲವು ಬಾರಿ ಟ್ಯಾಂಕ್ ಕಾಮಗಾರಿಗಳ

ಬಗ್ಗೆ ಜಲಜೀವನ್ ಮಿಷನ್‌ನ ಪೊನ್ನಂಪೇಟೆ ವಿಭಾಗದ ತಾಂತ್ರಿಕ ಇಂಜಿನಿಯರ್‌ಗೆ ದೂರು

ನೀಡಿದರು ಯಾವುದೇ ಪ್ರಯೋಜನ ವಾಗಿಲ್ಲ. ಕುಡಿಯುವ ನೀರು ಯೋಜನೆಗೆ ಕೇಂದ್ರದ ಅನುದಾನ ಪೋಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

(ಮೊದಲ ಪುಟದಿಂದ) ಹೆಗ್ಗಳ ರಾಮನಗರದ ನಿವಾಸಿ ತಿರೇಶ್ ಟಿ.ಎಂ. ಮಾತನಾಡಿ, ಸುಮಾರು ಎರಡು ವರ್ಷಗಳಿಂದ ಟ್ಯಾಂಕ್ ನಿರ್ಮಾಣ ಕಾರ್ಯ ನಡೆಯುತ್ತಿದೆ. ತುಕ್ಕು ಹಿಡಿದ ಕಬ್ಬಿಣ ಟ್ಯಾಂಕ್ ನಿರ್ಮಾಣಕ್ಕೆ ಬಳಕೆಯಾಗುತ್ತಿದೆ. ಅಲ್ಲದೆ ಮಾರುಕಟ್ಟೆಯಿಂದ ಖರೀದಿ ಮಾಡದೆ ಗುಜರಿ ಅಂಗಡಿಯಿAದ ಕಬ್ಬಿಣ ಖರೀದಿ ಮಾಡಿ ಟ್ಯಾಂಕ್ ನಿರ್ಮಾಣಕ್ಕೆ ಬಳಕೆ ಮಾಡಲಾಗುತ್ತಿದೆ. ಸುಮಾರು ೨೦ ಮಿಟರ್ ಉದ್ದದ ಪಿಲ್ಲರ್ ಸಮರ್ಪಕ ನಿರ್ಮಾಣವಾಗಿಲ್ಲ. ಅದನ್ನು ಸಿಮೆಂಟ್‌ನಿAದ ಮುಚ್ಚಿ ಕಾಣದ ರೀತಿಯಲ್ಲಿ ಮಾಡಲಾಗಿದೆ. ಇಲ್ಲಿ ಕೆಲವು ಮಂದಿ ಮನೆ, ಕಟ್ಟಡ ನಿರ್ಮಾಣ ಕೆಲಸದಲ್ಲಿ ನಿಪುಣತೆಯನ್ನು ಹೊಂದಿದ್ದಾರೆ. ಗ್ರಾಮದಲ್ಲಿ ನಿರ್ಮಾಣವಾಗುವ ಎಲ್ಲಾ ಸರ್ಕಾರಿ ಕಟ್ಟಡ ಕಾಮಗಾರಿಗಳು ಉತ್ತಮ ಗುಣಮಟ್ಟದಿಂದ ಕೂಡಿರಬೇಕು ಎನ್ನುವ ಮನೋಭಾವ ನಮ್ಮದು. ಆದರೆ ಕಳಪೆ ಗುಣಮಟ್ಟದ ಸಾಮಾಗ್ರಿಗಳನ್ನು ಬಳಕೆ ಮಾಡಿ ಕಟ್ಟಡ ನಿರ್ಮಾಣ ಮಾಡುತ್ತಿರುವುದು ಬೇಸರ ತಂದಿದೆ. ಹಲವು ಬಾರಿ ಟ್ಯಾಂಕ್ ನಿರ್ಮಾಣದ ಬಗ್ಗೆ ಗ್ರಾಮ ಪಂಚಾಯಿತಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಟ್ಯಾಂಕ್ ನಿರ್ಮಾಣ ಕಾರ್ಯ ಸ್ಥಗಿತಗೊಳಿಸುವಂತೆ ಕಾರ್ಮಿಕರಿಗೆ ತಾಕೀತು ಮಾಡಿದ್ದೇವೆ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಸದಸ್ಯ ರಜಾಕ್ ಮಾತನಾಡಿ, ಗ್ರಾಮಸ್ಥರಿಂದ ದೂರುಗಳು ಬಂದಿವೆ. ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದ್ದು ಸಂಬAಧಿಸಿದವರಿಗೆ ದೂರು ನೀಡಲಾಗಿದೆ. ಕೇವಲ ಗುತ್ತಿಗೆದಾರರನ್ನು ಬದಲಾವಣೆ ಮಾಡಿದ್ದಾರೆ ಹೊರತು ಕಾಮಗಾರಿಗಳ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸುತಿಲ್ಲ. ಇದರಿಂದ ಕೆಲಸ ವಿಳಂಬವಾಗುತ್ತಿದೆ. ಕಾಮಗಾರಿ ಸ್ಥಗಿತಗೊಳಿಸುವಂತೆ ಕಾರ್ಮಿಕರಿಗೆ ಸೂಚನೆ ನೀಡಲಾಗಿದೆ. ಈ ಬಗ್ಗೆ ಸ್ಥಳ ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಈ ಸಂದರ್ಭ ಬೇಟೋಳಿ ಗ್ರಾಮ ಪಂಚಾಯಿತಿಯ ಸದಸ್ಯ ಅಮ್ಮಣಕುಟ್ಟಂಡ ವಸಂತ್ ಕಟ್ಟಿ ಗ್ರಾಮಸ್ಥರಾದ ಜಗದೀಶ್, ಕಿಶೋರ್, ಚಾಮಿ, ಸತ್ಯ ಹಿರಿಯರಾದ ಸುಬ್ರಮಣಿ ಮತ್ತು ಗ್ರಾಮಸ್ಥರು ಹಾಜರಿದ್ದರು. -ಕಿಶೋರ್ ಕುಮಾರ್ ಶೆಟ್ಟಿ