ಭಾಗಮಂಡಲ, ಫೆ. ೬: ತಲಕಾವೇರಿ ಕ್ಷೇತ್ರದ ಕೆಳಭಾಗದ ಸುತ್ತಮುತ್ತಲಿನ ಪ್ರದೇಶದಲ್ಲಿ ಅಧಿಕ ಪ್ರಮಾಣದಲ್ಲಿ ಕಸ ಎಸೆಯಲಾಗಿದ್ದು, ಭಾಗಮಂಡಲ ಪ್ರಾದೇಶಿಕ ಅರಣ್ಯ ವಲಯದ ಸಿಬ್ಬಂದಿಗಳು ಪ್ಲಾಸ್ಟಿಕ್ ಸ್ವಚ್ಛಗೊಳಿಸುವ ಅಭಿಯಾನವನ್ನು ಹಮ್ಮಿಕೊಂಡರು.

ಎಲ್ಲೆಂದರಲ್ಲಿ ಕಸ, ಪ್ಲಾಸ್ಟಿಕ್ ಎಸೆಯುವ ಪ್ರವಾಸಿಗರಿಗೆ ಪ್ಲಾಸ್ಟಿಕ್ ಎಸೆಯದಂತೆ ಮನವಿ ಮಾಡಿಕೊಂಡಿದ್ದಾರೆ. ಸ್ವಚ್ಛತಾ ಅಭಿಯಾನದಲ್ಲಿ ವಲಯ ಅರಣ್ಯಾಧಿಕಾರಿ ರವೀಂದ್ರ, ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ್ ನಾಯಕ್, ಸೇರಿದಂತೆ, ಆರ್.ಆರ್.ಟಿ. ಸಿಬ್ಬಂದಿಗಳು ಭಾಗಿಯಾಗಿದ್ದರು.