(ಹೆಚ್.ಕೆ. ಜಗದೀಶ್)
ಗೋಣಿಕೊಪ್ಪಲು, ಫೆ. ೬: ಹಲವು ವರ್ಷಗಳಿಂದ ಅರ್ಜಿ ಸಲ್ಲಿಸಿ ಸೂಕ್ತ ದಾಖಲಾತಿಗೆ ಎದುರು ನೋಡುತ್ತಿದ್ದ ನಾಗರಿಕರಿಗೆ ಇದೀಗ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಬಗರ್ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯು ಅಸ್ತಿತ್ವಕ್ಕೆ ಬರುತ್ತಿದ್ದಂತೆಯೇ ಅರ್ಜಿ ಸಲ್ಲಿಸಿದ ಫಲಾನುಭವಿಗಳು ಕೊಂಚ ನಿರಾಳರಾಗಿದ್ದಾರೆ.
ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಶಿಫಾರಸ್ಸಿನ ಮೇರೆ ವೀರಾಜಪೇಟೆ, ಪೊನ್ನಂಪೇಟೆ ಹಾಗೂ ಮಡಿಕೇರಿ ತಾಲೂಕಿನ ಸಮಿತಿಗೆ ಅಧ್ಯಕ್ಷ ಹಾಗೂ ಸದಸ್ಯರನ್ನು ೮ ತಿಂಗಳ ನಂತರ ನೇಮಕಗೊಳಿಸಿ ಸಮಿತಿಯನ್ನು ಅಸ್ತಿತ್ವಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಮಿತಿಯ ಮುಂದೆ ಫಲಾನುಭವಿಗಳ ಸಾಗುವಳಿ ಚೀಟಿಗಳ ಕಡತವು ಮಂಡನೆಯಾಗಲಿದೆ. ವೀರಾಜಪೇಟೆ ತಾಲೂಕಿನ ವಿಧಾನಸಭಾ ಕ್ಷೇತ್ರದಲ್ಲಿ ೪ ಸಾವಿರಕ್ಕೂ ಅಧಿಕ ಫಲಾನುಭವಿಗಳು ಈ ಬಗ್ಗೆ ಅರ್ಜಿ ಸಲ್ಲಿಸಿದ್ದಾರೆ.
ಕೊಡಗಿನಲ್ಲಿ ಒಟ್ಟು ೧೮,೩೭೫ ಅರ್ಜಿಗಳು ವಿಲೇವಾರಿಗೆ ಬಾಕಿಯಿದ್ದು ಇವುಗಳಲ್ಲಿ ಮಡಿಕೇರಿ ತಾಲೂಕಿನ ೪೪೧೫ ಸೋಮವಾರಪೇಟೆ ತಾಲೂಕಿನ ೯೬೦೩, ಕುಶಾಲನಗರ ತಾಲೂಕಿನ ೧೫೬೯, ವೀರಾಜಪೇಟೆ ತಾಲೂಕಿನಲ್ಲಿ ೧೧೬೯ ಹಾಗೂ ಪೊನ್ನಂಪೇಟೆ ತಾಲೂಕಿನ ೧೬೧೯ ಅರ್ಜಿಗಳು ವಿಲೇವಾರಿಗೆ ಬಾಕಿ ಉಳಿದಿವೆ.
ಕೆಲವೆ ದಿನಗಳಲ್ಲಿ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅಧ್ಯಕ್ಷತೆಯಲ್ಲಿ ತಾಲೂಕು ತಹಶೀಲ್ದಾರ್, ಸಂಬAಧಿಸಿದ ಅಧಿಕಾರಿಗಳು ಹಾಗೂ ಬಗರ್ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಅಧ್ಯಕ್ಷರು ಹಾಗೂ ನಿರ್ದೇಶಕರೊಂದಿಗೆ ಸಭೆ ನಡೆಸುವ ಮೂಲಕ ವಿಲೇವಾರಿಗೆ ಬಾಕಿ ಇರುವ ಕಡತಗಳನ್ನು ಪರಿಶೀಲಿಸಿ ಅಗತ್ಯ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಲಿ ದ್ದಾರೆ.
ಸದ್ಯದಲ್ಲಿಯೇ ಸಭೆ
ಕ್ಷೇತ್ರದಲ್ಲಿ ಸಾಕಷ್ಟು ಫಲಾನು ಭವಿಗಳು ಅರ್ಜಿ ಯನ್ನು ಸಲ್ಲಿಸಿ ವರ್ಷಗಳೇ ಕಳೆದಿವೆ. ಇದೀಗ ಬಗರ್ಹುಕುಂ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಲ್ಲಾ ಸಮುದಾಯದ ಬಡವರ್ಗದ ಜನತೆಯ ಅರ್ಜಿಗಳನ್ನು ತುರ್ತಾಗಿ ವಿಲೇವಾರಿ ಮಾಡಲು ಆದಷ್ಟು ಬೇಗನೆ ಸಭೆ ಕರೆಯುತ್ತೇನೆ. ಸಮಿತಿಯ ಅಧ್ಯಕ್ಷರು ಹಾಗೂ
(ಮೊದಲ ಪುಟದಿಂದ) ಸದಸ್ಯರು ಒಳಗೊಂಡAತೆ ತಹಶೀಲ್ದಾರರ ಸಮ್ಮುಖದಲ್ಲಿ ಅರ್ಜಿಗಳನ್ನು ಪರಾಮರ್ಶಿಸಿ, ಕಾನೂನಾತ್ಮಕವಾಗಿ ಇರುವ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಲಾಗುವುದು. ಇದರಿಂದ ಬಡಜನತೆಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗುತ್ತೇವೆಂದು ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ.
ನಿಯಮಾನುಸಾರ ಕ್ರಮ
ಸಮಿತಿ ಅಸ್ತಿತ್ವಕ್ಕೆ ಬಂದಿದೆ. ಫಲಾನುಭವಿಗಳು ಸಲ್ಲಿಸಿರುವ ಅರ್ಜಿಗಳು ಇಲಾಖೆಯಲ್ಲಿದೆ. ಸಮಿತಿಯ ನಡಾವಳಿಯೊಂದಿಗೆ ಅರ್ಹತೆ ಹೊಂದಿರುವ ಫಲಾನುಭವಿಗಳ ಭೂಮಿಗಳಿಗೆ ತೆರಳಿ ಗ್ರಾಮ ಲೆಕ್ಕಿಗರು ಇಲಾಖೆಯು ನೀಡಿರುವ ಬಗರ್ಹುಕುಂ ಆ್ಯಪ್ ಮೂಲಕ ಸರ್ವೆ ಕಾರ್ಯ ನಡೆಸಲಾಗುತ್ತದೆ. ಕಂದಾಯ ಸಚಿವರು ಈ ಬಗ್ಗೆ ೮ ತಿಂಗಳೊಳಗೆ ಅರ್ಜಿ ವಿಲೇವಾರಿ ಮಾಡಲು ನಿರ್ದೇಶನ ನೀಡಿದ್ದಾರೆ. ಶಾಸಕರ ಸೂಚನೆಯಂತೆ ಸಮಿತಿಯು ಕೈಗೊಳ್ಳುವ ನಿರ್ಣಯದ ಹಿನ್ನೆಲೆಯಲ್ಲಿ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡುವ ಮೂಲಕ ಅರ್ಹ ಫಲಾನುಭವಿಗಳಿಗೆ ದಾಖಲಾತಿಗಳನ್ನು ನೀಡಲಾಗುತ್ತದೆ ಎಂದು ತಹಶೀಲ್ದಾರ್ ಹೆಚ್.ಎನ್. ರಾಮಚಂದ್ರ ಮಾಹಿತಿ ನೀಡಿದ್ದಾರೆ.