ಮಡಿಕೇರಿ, ಫೆ. ೭: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಗೆ ಫೆಬ್ರವರಿ ೧೬ ರೊಳಗೆ ಅಧ್ಯಕ್ಷರನ್ನು ನೇಮಕ ಮಾಡುವ ಸಾಧ್ಯತೆಗಳಿವೆ. ಕಳೆದ ಒಂದುವರೆ ವರ್ಷದಿಂದ ಅಧ್ಯಕ್ಷರಿಲ್ಲದೆ ಯಾವುದೇ ಚಟುವಟಿಕೆಗಳು ನಡೆಯದೆ ಸ್ತಬ್ಧವಾಗಿರುವ ಕೊಡವ ಹಾಗೂ ಅರೆಭಾಷೆ ಸಾಹಿತ್ಯ ಅಕಾಡೆಮಿಗೆ ಸದ್ಯದಲ್ಲೇ ಅಧ್ಯಕ್ಷರ ನೇಮಕಾತಿ ಮೂಲಕ ಮರುಜೀವ ಪಡೆಯುವ ಸಾಧ್ಯತೆಗಳಿವೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ವಹಿಸಿಕೊಂಡ ಕೂಡಲೇ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಇಲಾಖೆಗೆ ಒಳಪಡುವ ೧೪ ಅಕಾಡೆಮಿಗಳಿಗೆ ಅಧ್ಯಕ್ಷರನ್ನು ನೇಮಕ ನಡೆಯುವ ನಿರೀಕ್ಷೆ ಇತ್ತು.
ಮೊದಲ ಅಧಿವೇಶನದ ಬೆನ್ನಲ್ಲೇ ನೇಮಕ ಪಟ್ಟಿ ಹೊರಬೀಳಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವುದರಿಂದ ಅಧ್ಯಕ್ಷರ ನೇಮಕ ವಿಳಂಬವಾಗಿತ್ತು.
ಅAತಿಮವಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಎರಡನೇ ಬಜೆಟ್ ಫೆಬ್ರವರಿ ೧೬ ರಂದು ಮಂಡನೆಯಾಗಲಿದ್ದು, ಅದರೊಳಗೆ ಅಧ್ಯಕ್ಷ ಹಾಗೂ ಸದಸ್ಯರ ಆಯ್ಕೆ ನಡೆಯಲಿದೆ ಎಂದು ತಿಳಿದು ಬಂದಿದೆ.
ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ಬಿಗ್ ಫೈಟ್!
ಕೊಡವ ಸಾಹಿತ್ಯ ಅಕಾಡೆಮಿಗೆ ಆಕಾಂಕ್ಷಿಗಳ ನಡುವೆ ಅಧ್ಯಕ್ಷ ಸ್ಥಾನಕ್ಕಾಗಿ ಬಿಗ್ ಫೈಟ್ ನಡೆಯುತ್ತಿದೆ. ಜಿಲ್ಲಾ ಕಾಂಗ್ರೆಸ್ ಕೊಡವ ಸಮುದಾಯದ ನಾಯಕರು ಕೊಡವ ಸಾಹಿತ್ಯ ಅಕಾಡೆಮಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಶಾಸಕದ್ವಯರ ಬೆಂಬಲದಿAದ ಅಧ್ಯಕ್ಷ ಸ್ಥಾನ ಪಡೆಯುವ ಲೆಕ್ಕಾಚಾರದಲ್ಲಿ ಆಕಾಂಕ್ಷಿಗಳಿದ್ದಾರೆ. ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ, ತೆನ್ನೀರ ಮೈನಾ, ಕಾಂಗ್ರೆಸ್ ಮುಖಂಡ ನೆರವಂಡ ಉಮೇಶ್, ಮಾಜಿ ಎಂ.ಎಲ್.ಸಿ. ವೀಣಾ ಅಚ್ಚಯ್ಯ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಕೊಡವ ಮಕ್ಕಡ ಕೂಟ ಇದರ ಅಧ್ಯಕ್ಷ ಬೊಳ್ಳಜ್ಜಿರ ಅಯ್ಯಪ್ಪ ಕಣ್ಣಿಟ್ಟಿದ್ದಾರೆ.
ಪಕ್ಷ ನಿಷ್ಠೆ, ಹಿರಿತನ ಹಾಗೂ ಕಳೆದ ವಿಧಾನಸಭಾ ಚುನಾವಣೆಯ ಕಾರ್ಯವೈಖರಿ ನೋಡಿ ಅಧ್ಯಕ್ಷ ಸ್ಥಾನ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಇದೀಗ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ನೆರವಂಡ ಉಮೇಶ್ ಅವರಿಗೆ ವೀರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಮಡಿಕೇರಿ ತಾಲೂಕಿನ ಹೆಚ್ಚುವರಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಅಧ್ಯಕ್ಷರಾಗಿ ಫೆಬ್ರವರಿ ೫ರ ಸೋಮವಾರ ನೇಮಕ ಮಾಡಲಾಗಿದೆ.
ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ನೆರವಂಡ ಉಮೇಶ್ ಅವರಿಗೆ ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಸ್ಥಾನ ನೀಡಿರುವುದರಿಂದ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನ ನೀಡುವುದು ಅನುಮಾನವಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯವರಿಗೋ! ಎಂಬುದು ಕುತೂಹಲವಾಗಿವೆ.
ಅರೆಭಾಷೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬೇಕಲ್ ರಮಾನಾಥ್, ಎ.ಎಸ್. ಪೊನ್ನಣ್ಣ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಕೊಡಗು ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಂಚಾಲಕ ಸೂರಜ್ ಹೊಸೂರು, ಅರೆಭಾಷೆ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಹಾಗೂ ಕೊಡಗು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್, ಕೊಡಗು ಜಿಲ್ಲಾ ಸೇವಾದಳದ ಅಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ ಆಕಾಂಕ್ಷಿಗಳಾಗಿದ್ದಾರೆ. ಮತ್ತೊಂದೆಡೆ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನದ ಮೇಲೆ ಮುನೀರ್ ಅಹ್ಮದ್ ಕಣ್ಣಿಟ್ಟಿದ್ದಾರೆ.
- ಕೆ.ಎಂ. ಇಸ್ಮಾಯಿಲ್ ಕಂಡಕರೆ