ಕುಶಾಲನಗರ, ಫೆ. ೮: ಕುಶಾಲನಗರ ಸಮೀಪದ ಆನೆಕಾಡು ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಪಾದಚಾರಿಯೋರ್ವ ಸಾವನ್ನಪ್ಪಿದ್ದಾರೆ.
ಪಿಕಪ್ ವಾಹನ ನಡೆದುಕೊಂಡು ಹೋಗುತ್ತಿದ್ದ ಅಪರಿಚಿತ ವ್ಯಕ್ತಿಗೆ ಡಿಕ್ಕಿಪಡಿಸಿ ನಿಲ್ಲಿಸದೆ ತೆರಳಿದೆ. ತೀವ್ರ ರಕ್ತಸ್ರಾವಗೊಂಡ ಪಾದಚಾರಿ ಸ್ಥಳದಲ್ಲಿ ಸಾವನ್ನಪ್ಪಿದ್ದು, ಮೃತದೇಹವನ್ನು ಕುಶಾಲನಗರ ಆಸ್ಪತ್ರೆಯಲ್ಲಿಡಲಾಗಿದೆ.
ಕುಶಾಲನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.