ಶನಿವಾರಸಂತೆ, ಫೆ. ೮: ಸಮೀಪದ ಹಂಡ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಶನಿವಾರಸಂತೆ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಗುಡುಗಳಲೆ ಜಾತ್ರಾ ಮೈದಾನದಲ್ಲಿ ನಡೆಯುತ್ತಿರುವ ಶ್ರೀ ಜಯದೇವ ಜಾನುವಾರುಗಳ ಜಾತ್ರೆಯ ಮುಕ್ತಾಯ ಸಮಾರಂಭ ತಾ.೯ ರಂದು ಮಧ್ಯಾಹ್ನ ೨ ಗಂಟೆಗೆ ಕಲಾ ವೇದಿಕೆಯಲ್ಲಿ ನಡೆಯಲಿದೆ.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಸಮಾರಂಭ ಉದ್ಘಾಟಿಸಲಿದ್ದು, ಕಲ್ಲುಮಠದ ಮಹಾಂತಸ್ವಾಮೀಜಿ, ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, ಕಲ್ಲಳ್ಳಿ ಮಠದ ರುದ್ರಮುನಿ ಸ್ವಾಮೀಜಿ, ಮುದ್ದಿನಕಟ್ಟೆ ಮಠದ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಹಾಸನ-ಕೊಡಗು ಆದಿಚುಂಚನಗಿರಿ ಶಾಖಾ ಮಠದ ಶಂಭುನಾಥ ಸ್ವಾಮೀಜಿ, ಮನೆಹಳ್ಳಿ ಮಠದ ಮಹಾಂತಶಿವಲಿAಗ ಸ್ವಾಮೀಜಿ, ಶಿಡಿಗಳಲೆ ಮಠದ ಇಮ್ಮಡಿ ಶಿವಲಿಂಗ ಸ್ವಾಮೀಜಿ ಸಾನಿಧ್ಯ ವಹಿಸುತ್ತಾರೆ. ಜಾತ್ರಾ ಸಮಿತಿ ಅಧ್ಯಕ್ಷ ವಿನಯ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅರಕಲಗೂಡು ಶಾಸಕ ಎ.ಮಂಜು, ಸಕಲೇಶಪುರ ಶಾಸಕ ಸಿಮೆಂಟ್ ಮಂಜು, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ಶಾಸಕ ಅಪ್ಪಚ್ಚುರಂಜನ್, ಮಾಜಿ ಸಚಿವ ಬಿ.ಎ.ಜೀವಿಜಯ, ನಿಕಟ ಪೂರ್ವ ಸರ್ಕಾರಿ ಅಭಿಯೋಜಕ ಚಂದ್ರಮೌಳಿ, ಶನಿವಾರಸಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾಹರೀಶ್, ದುಂಡಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸತ್ಯವತಿ, ವೃತ್ತ ನಿರೀಕ್ಷಕ ಮುನಿಯಪ್ಪ, ಪಿಎಸ್ಐ ಗೋವಿಂದರಾಜ್ ಹಾಗೂ ಇತರ ಗಣ್ಯರು ಪಾಲ್ಗೊಳ್ಳುತ್ತಾರೆ ಎಂದು ಜಾತ್ರಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.