ಮುಳ್ಳೂರು, ಫೆ. ೮: ಸಮೀಪದ ಶನಿವಾರಸಂತೆ ಸಮೂಹ ಸಂಪನ್ಮೂಲ ಕೇಂದ್ರದಲ್ಲಿನ ನಿವೃತ್ತಗೊಂಡ ಶಿಕ್ಷಕರಿಗೆ ಶನಿವಾರಸಂತೆ ಕ್ಲಸ್ಟರ್ ಮತ್ತು ಕ್ಲಸ್ಟರ್ ವ್ಯಾಪ್ತಿಯ ಶಿಕ್ಷಕರು ಸನ್ಮಾನಿಸಿದರು.
ಶನಿವಾರಸಂತೆ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ನಿವೃತ್ತಿಗೊಂಡ ಶಿಕ್ಷಕರಾದ ಬಿ.ಎಂ. ನಟರಾಜ್, ಹೆಚ್.ಎಲ್. ಪದ್ಮಾವತಿ, ಫರಹತ್ತುನಿಸ್ಸಾ, ದೈಹಿಕ ಶಿಕ್ಷಣ ಶಿಕ್ಷಕ ಎಂ.ಎನ್. ಮಲ್ಲಿಕಾರ್ಜುನ ಇವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಶನಿವಾರಸಂತೆ ಕ್ಲಸ್ಟರ್ ಸಿಆರ್ಪಿ ಸಿ.ಕೆ. ದಿನೇಶ್ ನೇತೃತ್ವದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಶನಿವಾರಸಂತೆ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಬಿ.ಟಿ. ವಿಶ್ವನಾಥ್ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಗೋವಿಂದೇಗೌಡ, ಸರಕಾರಿ ನೌಕರರ ಸಂಘದ ನಿರ್ದೇಶಕ ಸುರೇಶ್, ಹಿರಿಯ ನಿವೃತ್ತ ಶಿಕ್ಷಕರಾದ ಸಿ.ಎಲ್. ಸುಬ್ಬಯ್ಯ, ಡಿ.ಬಿ. ಸೋಮಪ್ಪ, ರುಕ್ಮಿಣಿ, ಶಿಕ್ಷಕರುಗಳಾದ ಕೆ.ಪಿ. ಜಯಕುಮಾರ್, ಜೆಸಿಂತ, ಮಮತ, ಲತಾಮಣಿ ಹಾಗೂ ಶನಿವಾರಸಂತೆ ಕ್ಲಸ್ಟರ್ ವ್ಯಾಪ್ತಿಯ ಶಿಕ್ಷಕರು ಹಾಜರಿದ್ದರು.