ಮಡಿಕೇರಿ, ಫೆ. ೮: ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕುವ ಕಾರ್ಯಕ್ರಮವು ಮಾರ್ಚ್ ೩ ರಂದು ನಡೆಯಲಿದ್ದು, ವಿವಿಧ ಇಲಾಖೆಗಳು ಹಾಗೂ ಸಂಘ-ಸAಸ್ಥೆಗಳು ಅಗತ್ಯ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಲ್ಸ್ ಪೋಲಿಯೋ ಸಿದ್ಧತೆ ಬಗ್ಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪಲ್ಸ್ ಪೋಲಿಯೋ ಕಾರ್ಯಕ್ರಮ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜೊತೆ ಪಂಚಾಯತ್ ರಾಜ್, ಸಾರ್ವಜನಿಕ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪ್ರಾದೇಶಿಕ ಸಾರಿಗೆ ಇಲಾಖೆಗಳು ಅಗತ್ಯ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಶಾಲೆಗಳು, ಬಸ್ ನಿಲ್ದಾಣಗಳಲ್ಲಿ ಹಾಗೂ ಜನ ದಟ್ಟಣೆ ಪ್ರದೇಶಗಳಲ್ಲಿ ೫ ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಲು ಸಹಕಾರ ನೀಡಬೇಕು. ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಅಗತ್ಯ ವಾಹನ ನಿಯೋಜಿಸಬೇಕು.
ಪಲ್ಸ್ ಪೋಲಿಯೋ ಕಾರ್ಯ ಕ್ರಮ ದಿನದಂದು ವಿದ್ಯುತ್ ಸಂಪರ್ಕ ವನ್ನು ನಿರಂತರವಾಗಿ ಕಲ್ಪಿಸಬೇಕು. ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ರೋಟರಿ, ಲಯನ್ಸ್, ರೆಡ್ಕ್ರಾಸ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಕಾರ ಪಡೆಯುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕೆ.ಎಂ. ಸತೀಶ್ ಕುಮಾರ್ ಅವರು ಪಲ್ಸ್ ಪೋಲಿಯೋ ಕಾರ್ಯಕ್ರಮವು ಮಾರ್ಚ್ ೩ ರಂದು ಬೂತ್ ಮಟ್ಟದಲ್ಲಿ ನಡೆಯಲಿದೆ. ಮಾರ್ಚ್ ೪, ೫ ಮತ್ತು ೬ ರಂದು ಮೂರು ದಿನಗಳ ಕಾಲ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಹಾಗೂ ಮಾರ್ಚ್ ೪ ಮತ್ತು ೫ ರಂದು ಎರಡು ದಿನಗಳ ಕಾಲ ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಪೋಲಿಯೋ ಹನಿ ಹಾಕಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.
(ಮೊದಲ ಪುಟದಿಂದ) ಪ್ರವಾಸಿ ಸ್ಥಳಗಳು, ಬಸ್ ನಿಲ್ದಾಣಗಳಲ್ಲಿ ಪೋಲಿಯೋ ಬೂತ್ ತೆರೆಯಲು ಅವಕಾಶ ಮಾಡಬೇಕು. ಕಾರ್ಮಿಕರ ಮಕ್ಕಳು, ಕೊಳಗೇರಿ ಪ್ರದೇಶದಲ್ಲಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಲು ಸಹಕರಿಸುವಂತೆ ಕೋರಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಗ್ರಾಮೀಣ ಅಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ನಗರಾಭಿವೃದ್ಧಿ, ಕಾರ್ಮಿಕ, ಪೊಲೀಸ್, ವೈದ್ಯಕೀಯ ಶಿಕ್ಷಣ, ಸೆಸ್ಕ್, ಕೆಎಸ್ಆರ್ಟಿಸಿ, ಪ್ರವಾಸೋದ್ಯಮ ಹೀಗೆ ಎಲ್ಲಾ ಇಲಾಖೆಗಳು ಸಹಕಾರ ನೀಡುವಂತೆ ಮನವಿ ಮಾಡಿದರು.
ರೆಡ್ಕ್ರಾಸ್ ಸಂಸ್ಥೆಯ ಸಭಾಪತಿ ರವೀಂದ್ರ ರೈ ಅವರು ಮಾಹಿತಿ ನೀಡಿ ರೆಡ್ಕ್ರಾಸ್ ಸಂಸ್ಥೆಯಲ್ಲಿ ಒಂದು ವಾಹನವಿದ್ದು, ಒದಗಿಸಲಾಗುವುದು ಎಂದರು. ರೋಟರಿ ಮಿಸ್ಟಿ ಹಿಲ್ಸ್ ನಿರ್ದೇಶಕ ಡಾ. ಚೇತನ್. ರೋಟರಿ ಸಂಸ್ಥೆಯ ಅಚ್ಚಯ್ಯ, ರೋಟರಿಯನ್ ಮ್ರಾನಳಿನಿ ಅವರು ಈ ಹಿಂದಿನAತೆ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಅಗತ್ಯ ಸಹಕಾರ ನೀಡಲಾಗುವುದು ಎಂದರು. ಆರ್ಸಿಹೆಚ್ ಅಧಿಕಾರಿ ಡಾ. ಮಧುಸೂದನ, ಜಿಲ್ಲಾ ಸರ್ಜನ್ ಡಾ. ನಂಜುAಡಯ್ಯ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಕ್ಕಳ ವಿಭಾಗದ ಮುಖ್ಯಸ್ಥ ಡಾ. ಪುರುಷೋತ್ತಮ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ಶ್ರೀನಿವಾಸ್, ತಾಲೂಕು ವೈದ್ಯಾಧಿಕಾರಿ ಡಾ. ಚೇತನ್, ಇಂಧುದರ್, ಪ್ರಮೋದ್ ರೈ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪುಟ್ಟರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜು, ಪೌರಾಯುಕ್ತ ವಿಜಯ್, ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ಯೋಜನಾ ಸಮನ್ವಯಾಧಿಕಾರಿ ಎಂ. ಕೃಷ್ಣಪ್ಪ, ಪ್ರಾದೇಶಿಕ ಸಾರಿಗೆ ಕಚೇರಿಯ ಮೇಲ್ವಿಚಾರಕಿ ಸಲೀಮ, ಇತರರು ಇದ್ದರು.