ನಾಪೋಕ್ಲು, ಫೆ. ೮: ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಜೀವಿನಿ ಒಕ್ಕೂಟ ಹಾಗೂ ಮೂರ್ನಾಡು ಪದವಿಪೂರ್ವ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ಘಟಕದ ವತಿಯಿಂದ ಸ್ವಚ್ಛತಾ ಕಾರ್ಯವನ್ನು ನಡೆಸಲಾಯಿತು.

ಮೂರ್ನಾಡುವಿನಿಂದ ನಾಪೋಕ್ಲು ಹಾಗೂ ಮೂರ್ನಾಡು ವಿನಿಂದ ಪಾರಾಣೆ ಮಾರ್ಗದಲ್ಲಿ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು.

ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರರು ರಸ್ತೆಯ ಇಕ್ಕೆಲಗಳಲ್ಲಿ ಬಿದ್ದಿದ್ದ ಪ್ಲಾಸ್ಟಿಕ್, ಪೇಪರ್, ಕಸಗಳನ್ನು ತೆಗೆದು ಶುಚಿಗೊಳಿಸಿದರು.

ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಶನ್, ಗ್ರಾಮ ಪಂಚಾಯಿತಿ ಸದಸ್ಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಮೂರ್ನಾಡು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ದೇವಕಿ, ಎನ್.ಎಸ್.ಎಸ್. ಕಾರ್ಯ ಕ್ರಮಾಧಿಕಾರಿ ದಮಯಂತಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಗ್ರಾಮ ಪಂಚಾಯಿತಿ ವತಿಯಿಂದ ವಿದ್ಯಾರ್ಥಿಗಳಿಗೆ ಉಪಹಾರದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.