ಮಡಿಕೇರಿ ಫೆ. ೮: ಮೂರ್ನಾಡು ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜಿನಲ್ಲಿ ೧೯೯೮ ರಿಂದ ೨೦೦೦ ವರೆಗಿನ ಶೈಕ್ಷಣಿಕ ವರ್ಷದಲ್ಲಿ ಕಲಾ ವಿಭಾಗದಲ್ಲಿ ವಿದ್ಯಾರ್ಥಿಗಳು, ವಿದ್ಯಾಸಂಸ್ಥೆಯ ಮೈದಾನದಲ್ಲಿ ನೂತನವಾಗಿ ನಿರ್ಮಿಸಿರುವ ಶೌಚಾಲಯಗಳನ್ನು ಆಡಳಿತ ಮಂಡಳಿಗೆ ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ಬಾಚೆಟ್ಟಿರ ಮಾದಪ್ಪ, ಉಪಾಧ್ಯಕ್ಷ ಪುದಿಯೊಕ್ಕಡ ಸುಬ್ರಮಣಿ, ಖಜಾಂಚಿ ಬಡುವಂಡ ಸುಬ್ರಮಣಿ ಸೇರಿದಂತೆ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ಹಾಗೂ ಹಳೆಯ ವಿದ್ಯಾರ್ಥಿ ಮತ್ತು ಪ್ರಸಕ್ತ ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿರುವ ಕುಶನ್ಬಿ ಎ ಸೇರಿದಂತೆ ಹಳೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಹಳೆಯ ವಿದ್ಯಾರ್ಥಿ ಸತೀಶ್ ಅವರು ಮಾತನಾಡಿ, ಈ ವಿದ್ಯಾಸಂಸ್ಥೆಯಲ್ಲಿ ಓದಿದ ಹೆಮ್ಮೆ ನಮಗಿದೆ. ಸ್ವಚ್ಛ ಭಾರತ ಕಲ್ಪನೆಯಡಿ ಈ ಶೌಚಾಲಯ ನಿರ್ಮಿಸಲಾಗಿದೆ. ಭವಿಷ್ಯದ ದಿನಗಳಲ್ಲಿ ಇನ್ನಷ್ಟು ಕೊಡುಗೆಗಳನ್ನು ನೀಡುವ ಶಕ್ತಿ ನಮಗೆ ಲಭ್ಯವಾಗಲಿ ಎಂದು ನುಡಿದರು.

ವಿದ್ಯಾಸಂಸ್ಥೆಯ ಅಧ್ಯಕ್ಷರು ಮಾತನಾಡಿ, ಹಳೆಯ ಹಾಗೂ ಹಳೆಯ ವಿದ್ಯಾರ್ಥಿ ಮತ್ತು ಪ್ರಸಕ್ತ ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿರುವ ಕುಶನ್ಬಿ ಎ ಸೇರಿದಂತೆ ಹಳೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಹಳೆಯ ವಿದ್ಯಾರ್ಥಿ ಸತೀಶ್ ಅವರು ಮಾತನಾಡಿ, ಈ ವಿದ್ಯಾಸಂಸ್ಥೆಯಲ್ಲಿ ಓದಿದ ಹೆಮ್ಮೆ ನಮಗಿದೆ. ಸ್ವಚ್ಛ ಭಾರತ ಕಲ್ಪನೆಯಡಿ ಈ ಶೌಚಾಲಯ ನಿರ್ಮಿಸಲಾಗಿದೆ. ಭವಿಷ್ಯದ ದಿನಗಳಲ್ಲಿ ಇನ್ನಷ್ಟು ಕೊಡುಗೆಗಳನ್ನು ನೀಡುವ ಶಕ್ತಿ ನಮಗೆ ಲಭ್ಯವಾಗಲಿ ಎಂದು ನುಡಿದರು.

ವಿದ್ಯಾಸಂಸ್ಥೆಯ ಅಧ್ಯಕ್ಷರು ಮಾತನಾಡಿ, ಹಳೆಯ ವಿದ್ಯಾರ್ಥಿಗಳಿರುವ ವಿದ್ಯಾಸಂಸ್ಥೆಯ ಮೇಲಿನ ಅಭಿಮಾನ ಮೆಚ್ಚುವಂತದ್ದು. ಮುಂದೆ ಇನ್ನಷ್ಟು ಕೊಡುಗೆಗಳ ಮೂಲಕ ವಿದ್ಯಾಸಂಸ್ಥೆಯ ಬೆಳವಣಿಗೆಗೆ ಸಹಕರಿಸುವಂತೆ, ನಂತರ ಶೌಚಾಲಯವನ್ನು ಅಧಿಕೃತವಾಗಿ ವಿದ್ಯಾಸಂಸ್ಥೆಗೆ ಹಸ್ತಾಂತರಿಸುವ ಕಾರ್ಯಕ್ರಮ ನಡೆಯಿತು. ೧೯೯೮-೨೦೦೦ ಶೈಕ್ಷಣಿಕ ವರ್ಷದಲ್ಲಿ ಪದವಿಪೂರ್ವ ಕಾಲೇಜಿನಲ್ಲಿ ಕಲಾ ವಿಭಾಗದ ವಿದ್ಯಾರ್ಥಿ, ಈಗ ವಿದ್ಯಾಸಂಸ್ಥೆಯ ಪದವಿ ಕಾಲೇಜಿನಲ್ಲಿ ಉಪನ್ಯಾಸಕ ರಾಗಿರುವ ಹರೀಶ್ ಕಿಗ್ಗಾಲು ಅವರು ಸ್ವಾಗತಿಸಿ, ನಿರೂಪಿಸಿದರು.