ಮಡಿಕೇರಿ, ಫೆ. ೮: ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರö್ಯ, ಸರಳತೆ, ಅಹಿಂಸಾ ಮಾರ್ಗ, ಸಹ ಬಾಳ್ವೆ, ಅಸ್ಪೃಶ್ಯತೆ ನಿವಾರಣೆಗೆ ನಡೆಸಿದ ಪ್ರಯೋಗಗಳು ಸೇರಿದಂತೆ ವಿವಿಧ ವಿಷ ಯಗಳ ಕುರಿತು ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ ೧೫೪ನೇ ಜಯಂತಿ ನಿಮಿತ್ತ ಆಯೋಜಿಸಿದ್ದ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹುಮಾನ ವಿತರಿಸಿದರು.
ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅವರು ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತ ೯ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳು, ಸ್ಮರಣಿಕೆ ಹಾಗೂ ಗಾಂಧೀಜಿ ಅವರ ಜೀವ ಸಂದೇಶಗಳ ಕುರಿತು ಪುಸ್ತಕಗಳನ್ನು ವಿತರಿಸಿ ಶುಭಕೋರಿದರು. ಈ ಪೈಕಿ ಇಬ್ಬರು ಕೊಡಗಿನ ವಿದ್ಯಾರ್ಥಿಗಳಿಗೂ ಪ್ರಶಸ್ತಿ ದೊರಕಿದೆ.
ಪ್ರೌಢಶಾಲೆ ವಿಭಾಗದಲ್ಲಿ ವೀರಾಜಪೇಟೆಯ ಸಂತ ಅನ್ನಮ್ಮ ಪ್ರೌಢಶಾಲೆಯ ಅನಿರುದ್ಧ ಮನೋಜ್ ಹಾಗೂ ಪದವಿ ಪೂರ್ವ ವಿಭಾಗದಲ್ಲಿ ಮಡಿಕೇರಿಯ ಸಂತ ಮೈಕಲರ ಕಾಲೇಜಿನ ಹೃತ್ಪೂರ್ವಕ್ ಕೆ.ಎಸ್. ಆಯಾ ವಿಭಾಗಗಳಲ್ಲಿ ಪ್ರಥಮ ಸ್ಥಾನ ಗಳಿಸಿದ್ದು ಮುಖ್ಯಮಂತ್ರಿಗಳಿAದ ಪ್ರಶಸ್ತಿ ಹಾಗೂ ತಲಾ ರೂ. ೩೧,೦೦೦ ನಗದು ಬಹುಮಾನವನ್ನು ಸ್ವೀಕರಿಸಿದರು.