ಗೋಣಿಕೊಪ್ಪಲು, ಫೆ.೨೦: ಪತ್ರಕರ್ತನ ಸೋಗಿನಲ್ಲಿ ನಡುರಾತ್ರಿ ಸರ್ಕಾರಿ ಆಸ್ಪತ್ರೆಗೆ ತೆರಳಿ ಕರ್ತವ್ಯ ನಿರತ ಮಹಿಳಾ ಸಿಬ್ಬಂದಿ ಮೇಲೆ ತನ್ನ ಪೌರುಷ ತೋರಿಸಿದಲ್ಲದೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿ, ಇಂಚರ ಕೊಡಗು ಚಾನಲ್ ಮಾಲೀಕ ಡಿ.ನಾಗೇಶ್‌ನನ್ನು ಗೋಣಿಕೊಪ್ಪ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಳೆದ ೨೦ ದಿನಗಳಿಂದ ತಲೆಮರೆಸಿಕೊಂಡು ಮೈಸೂರು ಹಾಗೂ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಸುತ್ತಾಡುತ್ತಿದ್ದ. ಈತನನ್ನು ಪೊಲೀಸರು ಬಲೆಗೆ ಬೀಳಿಸುವ ಪ್ರಯತ್ನ ನಿರಂತರವಾಗಿ ಮಾಡುತ್ತಿದ್ದರು. ತಾ.೨೦ ರಂದು ಮೈಸೂರಿನಲ್ಲಿ ಆತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
(ಮೊದಲ ಪುಟದಿಂದ) ಕಳೆದ ಒಂದು ತಿಂಗಳ ಹಿಂದೆ ಪತ್ರಕರ್ತನ ಸೋಗಿನಲ್ಲಿ ಬಾಯಿಗೆ ಬಟ್ಟೆಯನ್ನು ಕಟ್ಟಿಕೊಂಡು ಗೋಣಿಕೊಪ್ಪಲುವಿನ ಸರ್ಕಾರಿ ಆಸ್ಪತ್ರೆಗೆ ನಡು ರಾತ್ರಿಯ ವೇಳೆ ತೆರಳಿ ಕರ್ತವ್ಯನಿರತ ಮಹಿಳಾ ಸಿಬ್ಬಂದಿಯು ಇರುವ ಕೊಠಡಿಯ ಬಾಗಿಲನ್ನು ಬಲವಂತವಾಗಿ ಬಡಿದು, ಕಾಲಿನಿಂದ ಒದ್ದು ಬಾಗಿಲನ್ನು ತೆರೆಸಿದ್ದ. ನಂತರ ಅವಾಚ್ಯ ಶಬ್ದಗಳಿಂದ ನಿಂದಿಸಿದಲ್ಲದೆ ಹಲವರ ಮೇಲೆ ಹಲ್ಲೆಗೆ ಮುಂದಾಗಿದ್ದ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಶಕ್ತಿ ಪತ್ರಿಕೆಯಲ್ಲಿ ಈತನ ವೀಡಿಯೋದ ಬಗ್ಗೆ ಸುದ್ದಿ ಪ್ರಕಟಗೊಂಡಿತ್ತು.
ಸುದ್ದಿ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಅಧಿಕಾರಿ ಡಾ. ಸತೀಶ್ ಕುಮಾರ್ ಅವರು ಪ್ರಕರಣಕ್ಕೆ ಸಂಬAಧಿಸಿದAತೆ ಗೋಣಿಕೊಪ್ಪ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದರು. ಮೇಲಧಿಕಾರಿಗಳ ಸೂಚನೆ ಮೇರೆ ಘಟನೆಗೆ ಸಂಬAಧಿಸಿದAತೆ ವಿವರ ನೀಡಿದ್ದ ಆಸ್ಪತ್ರೆ ಅಧಿಕಾರಿ, ಅನ್ಯಾಯಕ್ಕೆ ಒಳಗಾದ ಮಹಿಳೆಯ ರಕ್ಷಣೆಗೆ ನಿಲ್ಲುವುದರೊಂದಿಗೆ ಪೊಲೀಸ್ ದೂರು ನೀಡುವಲ್ಲಿ ಯಶಸ್ವಿಯಾಗಿದ್ದರು.
ಈ ಸುದ್ದಿಯು ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದಂತೆಯೇ ಡಿ.ನಾಗೇಶ್ ಅವಾಂತರದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು. ಇದನ್ನು ಗಮನಿಸಿದ ಆರೋಪಿ ನಾಗೇಶ್ ಗೋಣಿಕೊಪ್ಪಲುವಿನ ತನ್ನ ಚಾನಲ್ ಕಚೇರಿಯ ಬಳಿ ನಿಲ್ಲಿಸಿದ್ದ ಬೈಕ್ ಹಾಗೂ ಕಾರಿನೊಂದಿಗೆ ಪರಾರಿಯಾಗಿದ್ದ.
ನಂತರ ತನ್ನ ಮೊಬೈಲ್‌ನ್ನು ಸ್ವಿಚ್ ಆಫ್ ಮಾಡಿಕೊಂಡು, ಮೈಸೂರು ಹಾಗೂ ಬೆಂಗಳೂರು ಹಾಸನ ಭಾಗಗಳಲ್ಲಿ ತಲೆಮರಿಸಿಕೊಂಡಿದ್ದ. ಈತನ ಬಂಧನಕ್ಕೆ ಬಲೆಬೀಸಿದ ಪೊಲೀಸರು ಈತನ ಹುಡುಕಾಟದಲ್ಲಿ ತೊಡಗಿಸಿಕೊಂಡಿದ್ದರು. ದಿನದಿಂದ ದಿನಕ್ಕೆ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಜಾಗ ಬದಲಿಸುತ್ತಾ, ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ಆರೋಪಿಯನ್ನು ಬಂಧಿಸುವAತೆ ಸ್ಪಷ್ಟ ನಿರ್ದೇಶನ ನೀಡಿದ್ದರು. ಡಿವೈಎಸ್‌ಪಿ ಮೋಹನ್ ಕುಮಾರ್ ನೇತೃತ್ವದಲ್ಲಿ ಗೋಣಿಕೊಪ್ಪ ಠಾಣೆ ಸಬ್ ಇನ್ಸ್ಪೆಕ್ಟರ್ ರೂಪದೇವಿ ಬಿರಾದಾರ್, ಕ್ರೆöÊಮ್ ಪೊಲೀಸ್ ಸಿಬ್ಬಂದಿಗಳಾದ ಚಂದ್ರಶೇಖರ್, ಮಂಜುನಾಥ್ ಹಾಗೂ ತೇಜಸ್ ಅವರುಗಳು ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ಆರೋಪಿ ಡಿ. ನಾಗೇಶ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿ ನಾಗೇಶ್‌ನಿಂದ ಬೈಕ್‌ಅನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದು, ತನಿಖೆ ಮುಂದುವರೆದಿದೆ.
-ಹೆಚ್.ಕೆ. ಜಗದೀಶ್