ಗೋಣಿಕೊಪ್ಪಲು, ಫೆ. ೨೦: ಹುದಿಕೇರಿ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಕೂಡಲೇ ಚುನಾವಣೆ ನಡೆಯಬೇಕೆಂದು ವೀರಾಜಪೇಟೆ ಬಿಜೆಪಿ ಮಂಡಲ ಅಧ್ಯಕ್ಷರಾದ ಸುವಿನ್ ಗಣಪತಿ ಆಗ್ರಹಿಸಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರವನ್ನು ಒತ್ತಾಯಿಸುವ ಸಲುವಾಗಿ ಫೆ.೨೩ರ ಶುಕ್ರವಾರ ಬೆಳಿಗ್ಗೆ ೧೧ ಗಂಟೆಗೆ ಮಾಜಿ ಶಾಸಕರಾದ ಕೆ.ಜಿ. ಬೋಪಯ್ಯನವರ ಮುಂದಾಳತ್ವದಲ್ಲಿ ಮಡಿಕೇರಿಯ ಸಹಕಾರ ಸಂಘದ ಉಪನಿಬಂಧಕರ ಕಚೇರಿಯ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಹುದಿಕೇರಿ ಕೊಡವ ಸಮಾಜದಲ್ಲಿ ವೀರಾಜಪೇಟೆ ಮಂಡಲ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಸುವಿನ್ ಗಣಪತಿ, ಸಹಕಾರ ಸಂಘಕ್ಕೆ ಈಗಾಗಲೇ ನಾಲ್ಕು ಬಾರಿ ಚುನಾವಣೆ ದಿನಾಂಕ ನಿಗದಿ ಪಡಿಸಿ ಚುನಾ ವಣೆಯನ್ನು ಮುಂದೂಡುತ್ತಲೇ ಬಂದಿದ್ದಾರೆ. ಇದರಿಂದ ಸಂಘದ ಚಟುವಟಿಕೆಗೆ ಹಿನ್ನಡೆಯಾಗುತ್ತಿದೆ. ಸಂಘದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ತನಿಖೆಗೆ ನಮ್ಮ ಸಮ್ಮತಿಯಿದ್ದು ಚುನಾವಣೆಯನ್ನು ಮುಂದೂಡುವ ಉದ್ದೇಶ ಸರಿಯಲ್ಲ. ಹಿರಿಯರು ಕಟ್ಟಿ ಬೆಳೆಸಿರುವ ಈ ಸಹಕಾರ ಸಂಘದಲ್ಲಿ ೨೭೦೦ ಸದಸ್ಯರಿದ್ದಾರೆ. ಮುಂದಿನ ದಿನದಲ್ಲಿ ಸದಸ್ಯರುಗಳಿಗೆ ರಸಗೊಬ್ಬರ ಸೇರಿದಂತೆ ಸಾಲ ವಿಚಾರವಾಗಿ ಆಡಳಿತ ಮಂಡಳಿಯ ಅವಶ್ಯಕತೆ ಹೆಚ್ಚಿರುವು ದರಿಂದ ಕೂಡಲೇ ನಿಯಮದಂತೆ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದರು. ಇಲಾಖಾಧಿಕಾರಿಗಳು ನ್ಯಾಯಯುತವಾದ ರೀತಿಯಲ್ಲಿ ಚುನಾವಣೆ ನಡೆಸಲು ಆಗ್ರಹಿಸಿ ಮಾಜಿ ಶಾಸಕ ಕೆ.ಜಿ. ಬೋಪಯ್ಯ ಮುಂದಾಳತ್ವದಲ್ಲಿ ಪ್ರತಿಭಟನೆ ಕೈಗೆತ್ತಿಕೊಂಡಿದ್ದೇವೆ. ಪಕ್ಷದ ಮೂಲಕ ಮಡಿಕೇರಿಯ ಡಿಆರ್ ಕಚೇರಿಗೆ ಘೇರಾವ್ ಹಾಕಲಾಗುವುದು ಎಂದರು.

ಕೊಡಗು ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಗಳಾದ ನೆಲ್ಲಿರ ಚಲನ್ ಕುಮಾರ್ ಮಾತನಾಡಿ, ಹುದಿಕೇರಿ ಕೃಷಿ ಪತ್ತಿನ ಸಹಕಾರವು ತನ್ನ ಸ್ವಂತ ಬಂಡವಾಳದಿAದ ಮುಂದುವರೆಯುತ್ತಿದೆ. ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಹುದಿಕೇರಿ ಸಹಕಾರ ಸಂಘದಲ್ಲಿ ಹಸ್ತಕ್ಷೇಪ ಮಾಡುತ್ತಿರುವುದು ತಿಳಿದು ಬಂದಿದೆ. ಇವರ ವ್ಯಕ್ತಿತ್ವಕ್ಕೆ ಇದು ಶೋಭೆ ತರುವಂತದಲ್ಲ. ಇದರಲ್ಲಿ ರಾಜಕೀಯ ಬೆರೆಸುವುದು ಉತ್ತಮ ಬೆಳವಣಿಗೆಯಲ್ಲ. ಈಗಾಗಲೇ ೩ ಬಾರಿ ಚುನಾವಣೆ ಮುಂದೂಡಲಾಗಿದೆ. ಸಂಘದಲ್ಲಿ ಅಕ್ರಮ ನಡೆದಿದ್ದರೆ ತನಿಖೆ ನಡೆಸಲಿ ಇದಕ್ಕೆ ನಮ್ಮ ವಿರೋಧವಿಲ್ಲ. ಇದೀಗ ಸಂಘದ ಸದಸ್ಯರಿಗೆ ಸಾಲ ಮಂಜೂರು ಮಾಡಲು, ನವೀಕರಣ ಗೊಳಿಸಲು ದಿನಾಂಕ ಸಮೀಪಿಸುತ್ತಿದೆ. ಶಾಸಕರು ಈ ನಿಟ್ಟಿನಲ್ಲಿ ತಾವೇ ಮುಂದೆ ನಿಂತು ಸಂಘಕ್ಕೆ ಚುನಾವಣೆ ನಡೆಸಲು ಮುಂದಾಗಬೇಕೆAದು ಒತ್ತಾಯಿಸಿದರು.

ಸಂಘದ ಮಾಜಿ ಅಧ್ಯಕ್ಷರಾದ ಕೇಚಟ್ಟಿರ ಅರುಣ್ ಮಾತನಾಡಿ ಸಂಘದ ಕಾರ್ಯನಿರ್ವಹಣಾ ಧಿಕಾರಿಯನ್ನು ಯಾವುದೇ ನೋಟೀಸ್ ನೀಡದೆ ಅಮಾನತುಗೊಳಿಸಿರುವುದು ಸರಿಯಾದ ಕ್ರಮವಲ್ಲ ಇವರ ಅಮಾನತ್ತನ್ನು ರದ್ದುಗೊಳಿಸಿ, ಕೂಡಲೇ ನೇಮಕ ಮಾಡುವಂತೆ ಆಗ್ರಹಿಸಿದರು ಗೋಷ್ಠಿಯಲ್ಲಿ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಉಪಾಧ್ಯಕ್ಷರಾದ ಗುಮ್ಮಟ್ಟಿರ ಕಿಲನ್ ಗಣಪತಿ, ಭವ್ಯ, ವೀರಾಜಪೇಟೆ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಮುದ್ದಿಯಡ ಮಂಜು ಗಣಪತಿ, ಕುಟ್ಟಂಡ ಅಜಿತ್ ಕರುಂಬಯ್ಯ ಸೇರಿದಂತೆ ಪ್ರಮುಖ ನಾಯಕರು ಉಪಸ್ಥಿತರಿದ್ದರು.