ಕುಶಾಲನಗರ, ಫೆ. ೨೦: ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಮಟ್ಟದ ವಾರ್ಷಿಕ ಮಹಾಸಭೆಯಲ್ಲಿ ಕೊಡಗು ಜಿಲ್ಲೆಯ ನಾಲ್ವರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಾಧನೆ ಗುರುತಿಸಿ ಗೌರವಿಸಿ ಸನ್ಮಾನಿಸಲಾಯಿತು.

ಶಿವಮೊಗ್ಗದ ಕುವೆಂಪು ರಂಗಮAದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮೀಣ ಅಭಿವೃದ್ಧಿ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿರುವ ಗುಡ್ಡೆ ಹೊಸೂರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ಆರ್ ಸುಮೇಶ್, ಹೊದ್ದೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಬ್ದುಲ್ಲ ಮತ್ತು ಕ್ರೀಡಾ ಕ್ಷೇತ್ರದ ಸಾಧನೆಗಾಗಿ ದೊಡ್ಡಮಲ್ತೆ ಗ್ರಾಮದ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಮತ್ತು ಈ ಹಿಂದೆ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ವೇಣುಗೋಪಾಲ್ ಅವರುಗಳನ್ನು ಸನ್ಮಾನಿಸಲಾಯಿತು.