ಕುಶಾಲನಗರ, ಫೆ. ೨೦: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಕರ್ನಾಟಕ ಜನ ಜಾಗೃತಿ ವೇದಿಕೆ ಆಶ್ರಯದಲ್ಲಿ ಹೆಬ್ಬಾಲೆಯ ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಸ್ವಾಸ್ಥö್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.
ಪ್ರೌಢಶಾಲೆ ಶಿಕ್ಷಕ ಲೋಕೇಶ್ ಕಾರ್ಯಕ್ರಮ ಉದ್ಘಾಟಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಸಮಾಜದ ತಳಮಟ್ಟದ ಮಹಿಳೆಯರು ಸ್ವಾವಲಂಬಿ ಬದುಕು ಸಾಗಿಸುವಂತೆ ಮಾಡುವಲ್ಲಿ ಯಶಸ್ವಿಯಾಗಿದೆ ಎಂದು ಲೋಕೇಶ್ ಹೇಳಿದರು. ಸ್ವಾಸ್ಥö್ಯ ಸಂಕಲ್ಪ ಕಾರ್ಯಕ್ರಮದ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಹಿತವಚನ ನೀಡಿದ ಜನಜಾಗೃತಿ ವೇದಿಕೆಯ ಕೊಡಗು ಜಿಲ್ಲಾ ಸದಸ್ಯ ಎಂ.ಎನ್. ಚಂದ್ರಮೋಹನ್ ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಯುವ ಪೀಳಿಗೆಯ ಪಾತ್ರ ಪ್ರಮುಖವಾಗಿದೆ ಎಂದರು.
ಶಾಲಾ ಮುಖ್ಯೋಪಾಧ್ಯಾಯ ಬಸವರಾಜ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಚೈತನ್ಯ, ಹೆಬ್ಬಾಲೆ ವ್ಯಾಪ್ತಿಯ ಸೇವಾ ಪ್ರತಿನಿಧಿಗಳಾದ ಲಕ್ಷಿö್ಮ, ಗೀತಾ, ಪ್ರೌಢಶಾಲೆಯ ಹಿರಿಯ ಶಿಕ್ಷಕರಾದ ವೆಂಕಟ ನಾಯಕ್ ಮತ್ತಿತರರು ಇದ್ದರು.