ಪೊನ್ನಂಪೇಟೆ, ಫೆ. ೨೨: ಇಲ್ಲಿಗೆ ಸಮೀಪದ ಹುದೂರು ಶ್ರೀ ಅಯ್ಯಪ್ಪ, ಭಧ್ರಕಾಳಿ ಮತ್ತು ಭಗವತಿ ದೇವಸ್ಥಾನದ ಆವರಣದಲ್ಲಿ ತಾ. ೨೩ರಂದು ಮಹಾ ಚಂಡಿಕಾ ಹೋಮ ನಡೆಯಲಿದೆ ಎಂದು ದೇವಸ್ಥಾನದ ತಕ್ಕಮುಖ್ಯಸ್ಥರು ಹಾಗೂ ಅಧ್ಯಕ್ಷ ಅಡ್ಡಂಡ ಪ್ರಕಾಶ್ ಕುಶಾಲಪ್ಪ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ತಾ. ೨೩ ರಂದು ಬೆಳಿಗ್ಗೆ ೭ ಗಂಟೆಯಿAದ ಉಡುಪಿಯ ತಂತ್ರಿಗಳಾದ ವಿಖ್ಯಾತ್ ಭಟ್ ಅವರ ನೇತೃತ್ವದಲ್ಲಿ ಬೆಳಿಗ್ಗೆ ೭.೩೦ಕ್ಕೆ ಗಣಹೋಮದ ನಂತರ ಚಂಡಿಕಾ ಹೋಮ ನಡೆಯಲಿದೆ. ಮಧ್ಯಾಹ್ನ ೧೨.೩೦ ರಿಂದ ಪೂರ್ಣಾಹುತಿ, ಮಧ್ಯಾಹ್ನ ೧ ಗಂಟೆಗೆ ತೀರ್ಥ ಪ್ರಸಾದ ವಿನಿಯೋಗ, ನಂತರ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.