ಮಡಿಕೇರಿ, ಫೆ. ೨೨: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು ಒಂದು ಸಾವಿರ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ನೇಮಕಾತಿ ಸಂಬAಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದ್ದು, ಕೊಡಗು ಜಿಲ್ಲೆಯಲ್ಲಿ ೬ ಹುದ್ದೆಗಳ ಭರ್ತಿಗೂ ಅವಕಾಶ ದೊರೆಯಲಿದೆ.

ಈ ಸಂಬAಧ ಪ್ರಾಧಿಕಾರಿ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ರಾಜ್ಯದ ನಾನಾ ಭಾಗಗಳಲ್ಲಿ ಈ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹು ದಾಗಿದೆ. ರೂ. ೨೧,೪೦೦ ರಿಂದ ರೂ ೪೨ ಸಾವಿರ ತನಕ ವೇತನ ಶ್ರೇಣಿ ದೊರೆಯಲಿದೆ.

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಶಿಕ್ಷಣ ಅರ್ಹತೆ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹು ದಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಟ ೩೫ ವರ್ಷ, ಪ್ರವರ್ಗ ೨ಬಿ, ೩ಎ, ೩ಬಿ ಅಭ್ಯರ್ಥಿಗಳಿಗೆ ಗರಿಷ್ಟ ೩೮ ವರ್ಷ, ಪರಿಶಿಷ್ಟ ಜಾತಿ, ಪಂಗಡ ಹಾಗೂ ಪ್ರವರ್ಗ ೧ ಅಭ್ಯರ್ಥಿಗಳಿಗೆ ಗರಿಷ್ಟ ೪೦ ವರ್ಷಗಳ ವಯೋಮಾನ ಹೊಂದಿರುವವರು ಪ್ರಾಧಿಕಾರದ ವೆಬ್‌ಸೈಟ್ hಣಣಠಿ://ಞeಚಿ.ಞಚಿಡಿ.ಟಿiಛಿ.iಟಿ ಲಿಂಕ್ ಬಳಸಿ ಅನ್‌ಲೈನ್ ಮೂಲಕ ಯಾವುದಾದರೂ ಒಂದು ಜಿಲ್ಲೆಗೆ ಮಾರ್ಚ್ ೪ ರಿಂದ ಏಪ್ರಿಲ್ ೩ ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಸಾಮಾನ್ಯ ಮತ್ತು ಇತರ ಪ್ರವರ್ಗಗಳಿಗೆ ರೂ. ೭೫೦, ಪರಿಶಿಷ್ಟ ಜಾತಿ, ಪಂಗಡ, ಪ್ರವರ್ಗ-೧. ಮಾಜಿ ಸೈನಿಕ ಮತ್ತು ವಿಶೇಷ ಚೇತನ ಅಭ್ಯರ್ಥಿಗಳು ರೂ. ೫೦೦ ಶುಲ್ಕ ಪಾವತಿಸಬೇಕಾಗುತ್ತದೆ ಎಂದು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

ಹುದ್ದೆಗಳಿಗೆ ಸ್ಮರ್ಧಾತ್ಮಕ ಪರೀಕ್ಷೆಯನ್ನು ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ. ೧೫೦ ಅಂಕಗಳಿಗೆ ಪರೀಕ್ಷೆ ನಡೆಯಲಿದ್ದು, ಕನಿಷ್ಟ ೫೦ ಅಂಕ ಗಳಿಸಬೇಕು. ಹೆಚ್ಚಿನ ಮಾಹಿತಿಗೆ ಮಾಹಿತಿ ಕೇಂದ್ರ ೦೮೦-೨೩೪೬೦೪೬೦ ಸಂಖ್ಯೆಯನ್ನು ಸಂಪರ್ಕಿಸುವAತೆ ತಿಳಿಸಲಾಗಿದೆ.