ಕುಶಾಲನಗರ, ಫೆ. ೨೨: ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಸ್ವಾರ್ಥ ಹಾಗೂ ರಾಜಕೀಯಕ್ಕಾಗಿ ದಿಕ್ಕಾಪಾಲು ಮಾಡುತ್ತಿರುವುದು ವಿಷಾದಕರ ಅಂಶವಾಗಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಜಮೀರ್ ಅಹ್ಮದ್ ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಕುಶಾಲನಗರದಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಮತ್ತು ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಂವಿಧಾನ ಸಾರ್ವಕಾಲಿಕ ಗ್ರಂಥವಾಗಿದೆ. ಸಂವಿಧಾನದ ಆಶಯವನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು. ಸಂವಿಧಾನದ ಮೌಲ್ಯಗಳನ್ನು ಅರಿತುಕೊಳ್ಳುವ ಮೂಲಕ ಸಮಾಜದ ತಾರತಮ್ಯವನ್ನು ಹೋಗಲಾಡಿಸಬೇಕು ಎಂದು ಅವರು ಹೇಳಿದರು.
ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಮಾತನಾಡಿದ ಮಲೆ ಮಹದೇಶ್ವರ ಪದವಿ ಕಾಲೇಜಿನ ಪ್ರಾಂಶುಪಾಲ ಸಿದ್ದರಾಜು ಅವರು, ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಮಹತ್ವವನ್ನು ಪ್ರತಿಯೊಬ್ಬರು ಅರಿತು ಇತರರಿಗೂ ತಿಳಿಸುವ ಕೆಲಸ ಮಾಡಬೇಕಾಗಿದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕುಶಾಲನಗರ ಕಾವೇರಿ ತಾಲೂಕು ಹೋರಾಟ ಸಮಿತಿಯ ಸಂಚಾಲಕ ವಿ.ಪಿ. ಶಶಿಧರ್, ಸಂವಿಧಾನ ಜೀವ ಸಂಕುಲಗಳ ಬದುಕು ಸಂರಕ್ಷಣೆ ಮಾಡುವ ಆಡಳಿತಾತ್ಮಕ ಕಾನೂನು ಆಗಿದ್ದು ಎಲ್ಲರೂ ಗೌರವಿಸಬೇಕಾಗಿದೆ. ಸಂವಿಧಾನವನ್ನು ನಾವು ಗೌರವಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ ಎಂದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ವಿವಿಧ ಸಂಘ-ಸAಸ್ಥೆಗಳು ಹಾಗೂ ಪುರಸಭೆ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಕಿರಣ್ ಗೌರಯ್ಯ, ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಂವಿಧಾನ ಪೀಠಿಕೆಯ ಪ್ರಮಾಣ ವಚನ ಬೋಧಿಸಿದರು. ನಂತರ ಮಾತನಾಡಿದ ಅವರು, ಸಂವಿಧಾನದ ಮಹತ್ವ ಮತ್ತು ಅದರ ಆಶಯಗಳನ್ನು ದೇಶದ ಪ್ರತಿಯೊಬ್ಬ ಪ್ರಜೆಗೂ ಅರಿವು ಮೂಡಿಸುವ ನಿಟ್ಟಿನಲ್ಲಿ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ. ನಾಗರಿಕರು ಸಂವಿಧಾನದ ಮಹತ್ವವನ್ನು ಅರಿತು, ಅದರ ಆಶಯದಂತೆ ನಡೆದುಕೊಂಡರೆ ದೇಶವು ಅಭಿವೃದ್ಧಿಯ ಪಥದಲ್ಲಿ ಸಾಗುತ್ತದೆ. ಜತೆಗೆ ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲೆಸುತ್ತದೆ ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಮುನ್ನ ಕಲಾವಿದ ನಂಜುAಡಸ್ವಾಮಿ ಅವರು ಕ್ರಾಂತಿ ಗೀತೆ ಹಾಡಿದರು. ಈ ಸಂದರ್ಭ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಸಿದ್ದೇಗೌಡ, ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ, ಸೋಮವಾರಪೇಟೆ ತಾಲೂಕು ಪಂಚಾಯಿತಿ ಇ.ಓ. ಜಯಣ್ಣ, ಪುರಸಭೆ ಮುಖ್ಯಾಧಿಕಾರಿ ಹಾಗೂ ಕಾರ್ಯಕ್ರಮದ ನೋಡಲ್ ಅಧಿಕಾರಿ ಕೃಷ್ಣ ಪ್ರಸಾದ್, ಆರೋಗ್ಯ ಅಧಿಕಾರಿ ಉದಯಕುಮಾರ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸಿದ್ದೇಗೌಡ, ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿ ವಿಮಲ, ಕನ್ನಡ ಸಾಹಿತ್ಯ ಪರಿಷತ್ ಕುಶಾಲನಗರ ತಾಲೂಕು ಅಧ್ಯಕ್ಷ ನಾಗೇಶ್, ಪುರಸಭೆ ಮಾಜಿ ಅಧ್ಯಕ್ಷ ಜಯವರ್ಧನ್, ಮಾಜಿ ಉಪಾಧ್ಯಕ್ಷೆ ಸುರಯ್ಯ ಬಾನು, ಸದಸ್ಯರಾದ ಸುರೇಶ್, ಆನಂದ್ ಕುಮಾರ್, ಜಯಲಕ್ಷö್ಮಮ್ಮ, ಕೂಡಾ ಸದಸ್ಯ ಕಾರ್ಯದರ್ಶಿ ಸ್ವಾತಿ, ಸಾಮಾಜಿಕ ಹೋರಾಟಗಾರರಾದ ನಿರ್ವಾಣಪ್ಪ ಹೊನ್ನಪ್ಪ, ದಲಿತ ಸಂಘರ್ಷ ಸಮಿತಿ ಭೀಮ ವಾದ ಜಿಲ್ಲಾಧ್ಯಕ್ಷ ಕೆ.ಬಿ. ರಾಜು, ಅಂಬೇಡ್ಕರ್ ಜನಪರ ವೇದಿಕೆಯ ಜಿಲ್ಲಾ ಅಧ್ಯಕ್ಷ ಜಯಪ್ರಕಾಶ್, ಸತೀಶ್, ಲೋಕೇಶ್, ವಾಲ್ಮಿಕಿ ಸಮಾಜದ ಅಧ್ಯಕ್ಷ ಅಶೋಕ್, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತರು, ವಿವಿಧ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಿವಿಧ ಶಾಲೆಗಳಲ್ಲಿ ಏರ್ಪಡಿಸಿದ ಸಂವಿಧಾನ ಕುರಿತಾದ ಭಾಷಣ, ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮಕ್ಕೆ ಮುನ್ನ ಕುಶಾಲನಗರ ಗಂಧದಕೋಟಿ ಬಳಿ ಸಂವಿಧಾನ ಜಾಗೃತಿ ಜಾಥಾ ರಥವನ್ನು ಬರಮಾಡಿಕೊಳ್ಳಲಾಯಿತು. ನಂತರ ಕುಶಾಲನಗರ ಪಟ್ಟಣಗಳ ಮುಖ್ಯಬೀದಿಗಳಲ್ಲಿ ಮೆರವಣಿಗೆ ತೆರಳಿ ಕಾರ್ಯಕ್ರಮ ಸಭಾಂಗಣಕ್ಕೆ ತೆರಳಿದರು.