ಮಡಿಕೇರಿ, ಫೆ. ೨೨: ವಿಶ್ವರಾಷ್ಟç ಸಂಸ್ಥೆಯ ಅಂತರರಾಷ್ಟಿçÃಯ ಮಾತೃಭಾಷಾ ದಿನದಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿತು.
೨೦೨೪ರ ವಿಶ್ವ ಮಾತೃಭಾಷಾ ದಿನದಂದು ಯುನೆಸ್ಕೋ “ಜಗತ್ತಿನಾದ್ಯಂತ ಮಾತೃಭಾಷೆಗಳಲ್ಲಿ ವೈವಿಧ್ಯ ಭಾಷೆಗಳ ಶಿಕ್ಷಣ ಕಲಿಕೆಗೆ ಆದ್ಯತೆ” ಎಂಬ ಘೋಷವಾಕ್ಯವನ್ನು ಮೊಳಗಿಸಿದ್ದು, ಕೊಡವ ಭಾಷೆಯನ್ನು ಸಂವಿಧಾನದ ೮ನೇ ಶೆಡ್ಯೂಲ್ ಗೆ ಸೇರಿಸಬೇಕೆಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದರು.
ಕೊಡವ ಭಾಷೆಯನ್ನು ವಿಶ್ವ ರಾಷ್ಟç ಸಂಸ್ಥೆಯ ಅಧಿಕೃತ ಭಾಷೆಗಳಲ್ಲೊಂ ದಾಗಿ ಪರಿಗಣಿಸಬೇಕು. ಪ್ರತೀ ವರ್ಷ ಆಕ್ಸ÷್ಫರ್ಡ್ ಡಿಕ್ಷನರಿಯೂ ಜಗತ್ತಿನ ವಿವಿಧ ಭಾಷೆಗಳ ೧೫ ಸಾವಿರ ಹೊಸ ಪದಗಳನ್ನು ಆಯ್ಕೆ ಮಾಡಿ ಅಳವಡಿ ಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ಈ ಆಕ್ಸ÷್ಫರ್ಡ್ ಡಿಕ್ಷನರಿಯಲ್ಲಿ ಕೊಡವ ಭಾಷೆಯ ಪದಗಳನ್ನು ಸೇರಿಸುವುದರ ಮೂಲಕ ಕೊಡವ ಭಾಷೆ ಮತ್ತು ಆಕ್ಸ÷್ಫರ್ಡ್ ಡಿಕ್ಷನರಿ ಎರಡನ್ನು ಕೂಡ ಸಮೃದ್ಧ ಮತ್ತು ಶ್ರೀಮಂತಗೊಳಿಸಬೇಕು ಎಂಬ ಬೇಡಿಕೆಯೊಂದಿಗೆ ಒಟ್ಟು ೨೭ ಹಕ್ಕೊತ್ತಾಯಗಳನ್ನು ಮಂಡಿಸಿದರು.
ಧರಣಿಯಲ್ಲಿ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ, ಚೋಳಪಂಡ ಜ್ಯೋತಿ ನಾಣಯ್ಯ, ಅಜ್ಜಿನಿಕಂಡ ಇನಿತಾ ಮಾಚಯ್ಯ, ಕಾಂಡೇರ ಸುರೇಶ್, ಬಾಚರಣಿಯಂಡ ಚಿಪ್ಪಣ್ಣ, ಅಜ್ಜಿಕುಟ್ಟೀರ ಲೋಕೇಶ್, ಚಂಬAಡ ಜನತ್, ಕಿರಿಯಮಾಡ ಶೆರಿನ್, ಪುಟ್ಟಿಚಂಡ ದೇವಯ್ಯ, ಮಣವಟ್ಟಿರ ಚಿಣ್ಣಪ್ಪ, ಕೂಪದಿರ ಸಾಬು, ನಂದಿನೆರವAಡ ಅಪ್ಪಯ್ಯ, ನಂದಿ ನೆರವಂಡ ವಿಜು, ಚೋಳಪಂಡ ನಾಣಯ್ಯ, ಪುದಿಯೊಕ್ಕಡ ಕಾಶಿ, ಬೇಪಡಿಯಂಡ ದಿನು, ಬೇಪಡಿಯಂಡ ಬಿದ್ದಪ್ಪ, ಅಜ್ಜಿನಿಕಂಡ ಸನ್ನಿ, ಅಪ್ಪೆಯಂಗಡ ಮಾಲೆ, ಕೋಡಿರ ರತನ್, ಮಣವಟ್ಟಿರ ಸ್ವರೂಪ್, ನಂದೇಟಿರ ಸುಬ್ಬಯ್ಯ, ಮೇದುರ ಕಂಠಿ, ಅಪ್ಪರಂಡ ಪ್ರಸಾದ್, ಅವರೆಮಾದಂಡ ಚಂಗಪ್ಪ ಪಾಲ್ಗೊಂಡು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ಕೊಡವ ಕೊಡವತಿಯರು ಸಂವಿಧಾನಿಕ ಹಕ್ಕೊತ್ತಾಯಗಳ ಸಾಧನೆಗಾಗಿ ಗುರು-ಕಾರೋಣ, ಧಾರ್ಮಿಕ ಸಂಸ್ಕಾರ ಕೋವಿ, ಸೂರ್ಯ-ಚಂದ್ರ, ಭೂದೇವಿ, ದೈವಿಕ ಜಲದೇವಿ ಕಾವೇರಿ ಮತ್ತು ವನದೇವತೆ ಹೆಸರಿನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.