ಕುಶಾಲನಗರ, ಫೆ. ೨೨: ಶ್ರೀ ಬಲಮುರಿ ಸಿದ್ಧಿ ವಿನಾಯಕ ದೇವಸ್ಥಾನ ೨೬ನೇ ವಾರ್ಷಿಕೋತ್ಸವ ಹಾಗೂ ೨೪ನೇ ವರ್ಷದ ಉತ್ಸವ ಮೂರ್ತಿಯ ಮೆರವಣಿಗೆ ಅದ್ದೂರಿಯಾಗಿ ನಡೆಯಿತು. ಎರಡು ದಿನಗಳ ಕಾಲ ವಿಶೇಷ ಪೂಜಾ ಕಾರ್ಯಕ್ರಮ ನಡೆದು ಭಕ್ತಾದಿಗಳಿಗೆ ಅನ್ನಸಂತರ್ಪಣೆ ಕಾರ್ಯ ನಡೆಯಿತು.
ಈ ಸಂದರ್ಭ ದೇವಾಲಯದ ಆವರಣದಲ್ಲಿ ಶ್ರೀ ಬಲಮುರಿ ಸಿದ್ಧಿ ವಿನಾಯಕ ದೇವಸ್ಥಾನದ ಅಧ್ಯಕ್ಷ ಡಿ.ಜೆ. ರೇಣು ಕುಮಾರ್ ಮತ್ತು ಆಡಳಿತ ಮಂಡಳಿ ನೇತೃತ್ವದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಾಜಿ ಸೈನಿಕರನ್ನು ಹಾಗೂ ಸಾಧಕರಿಗೆ ಸನ್ಮಾನಿಸಿ, ಗೌರವಿಸಲಾಯಿತು.
ದೇವಾಲಯದ ಗಣಪತಿ ಮೂರ್ತಿಗೆ ಮುಂದಿನ ಒಂದು ವರ್ಷದ ಅವಧಿಯ ಒಳಗಾಗಿ ಮೂರು ಕೆ.ಜಿ. ಬೆಳ್ಳಿಯ ಮುಖವಾಡ ಅರ್ಪಿಸಲು ಆಡಳಿತ ಮಂಡಳಿ ಚಿಂತನೆಹರಿಸಿದೆ. ಭಕ್ತಾದಿಗಳು ಸಹಕರಿಸುವಂತೆ ರೇಣುಕುಮಾರ್ ಕೋರಿದರು.
ಕುಶಾಲನಗರ ದೇವಾಲಯಗಳ ಒಕ್ಕೂಟದ ಪ್ರತಿನಿಧಿಗಳು ದೇವಾಲ ಯಕ್ಕೆ ಫಲ ತಾಂಬೂಲಗಳೊAದಿಗೆ ಆಗಮಿಸಿ ಸಾಮೂಹಿಕ ಪೂಜೆ ಸಲ್ಲಿಸಿದರು. ಈ ಸಂದರ್ಭ ದೇವಾಲಯಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಂ.ಎನ್. ಚಂದ್ರಮೋಹನ್, ಖಜಾಂಚಿ ಎಸ್.ಕೆ. ಶ್ರೀನಿವಾಸರಾವ್ ಮತ್ತು ವಿವಿಧ ದೇವಾಲಯಗಳ ಅಧ್ಯಕ್ಷರು ಆಡಳಿತ ಮಂಡಳಿ ಸದಸ್ಯರುಗಳು ಪಾಲ್ಗೊಂಡಿದ್ದರು. ದೇವಾಲಯದ ಆವರಣದಲ್ಲಿ ಸಂಗೀತ ಸಾಗರ್ ಮತ್ತು ಬ್ಲೂ ಸ್ಟಾರ್ ಮೆಲೋಡಿಸ್ ಅವರಿಂದ ಮನರಂಜನ ಕಾರ್ಯಕ್ರಮ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಸಂಜೆ ಉತ್ಸವ ಮೂರ್ತಿಯನ್ನು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ದೇವಾಲಯದ ಆಡಳಿತ ಮಂಡಳಿ ಉಪಾಧ್ಯಕ್ಷ ಶಿವರಾಂ, ದೇವಾಲಯದ ಆಡಳಿತ ಮಂಡಳಿ ಗೌರವಾಧ್ಯಕ್ಷರು ಹಾಗೂ ಪುರಸಭೆ ಸದಸ್ಯರಾದ ಎಂ.ಕೆ. ದಿನೇಶ್, ಕಾರ್ಯದರ್ಶಿ ಅರುಣ್ ಕುಮಾರ್ ಮತ್ತಿತರರು ಇದ್ದರು.