ಶನಿವಾರಸಂತೆ, ಫೆ. ೨೨: ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಬೇಕು ಎಂದು ದೊಡ್ಡಕೊಡ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಾಗೇಶ್ ಹೇಳಿದರು.

ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ದೊಡ್ಡಕೊಡ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ನಡೆದ “ನಮ್ಮ ನಡೆ ಸರ್ಕಾರಿ ಶಾಲೆ ಕಡೆ’’ ವಿಶೇಷ ದಾಖಲಾತಿ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹಿಂದೆ ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ಇಂದು ಉನ್ನತ ಅಧಿಕಾರಿಗಳ ಸ್ಥಾನ ಅಲಂಕರಿಸಿದ್ದಾರೆ. ಖಾಸಗಿ ಶಾಲೆಗಳಿಗೆ ಅಪಾರ ಹಣ ತೆತ್ತು ಮಕ್ಕಳನ್ನು ಸೇರಿಸಲಾಗುತ್ತಿದೆ. ಆದರೆ, ಸರ್ಕಾರಿ ಶಾಲೆಯಲ್ಲಿ ಸರ್ಕಾರವೇ ಮಕ್ಕಳಿಗೆ ಸೌಲಭ್ಯ ನೀಡುತ್ತಿದೆ.

ಬಿಸಿಯೂಟ, ಮೊಟ್ಟೆ, ನುರಿತ ಶಿಕ್ಷಕರಿಂದ ಶಿಕ್ಷಣ ಎಲ್ಲವನ್ನೂ ನೀಡುತ್ತಿದೆ. ಆದ್ದರಿಂದ ಪೋಷಕರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸಬೇಕು ಎಂದು ಅವರು ಕರೆ ನೀಡಿದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಧು ಮಾತನಾಡಿ, ವಿಶೇಷ ದಾಖಲಾತಿ ಆಂದೋಲನ ಕಾರ್ಯ ಕ್ರಮದ ಉದ್ದೇಶ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚು ಮಾಡುವುದು ಹಾಗೂ ಮಕ್ಕಳಲ್ಲಿ ಕಲಿಕೆಯ ಬಗ್ಗೆ ಆಸಕ್ತಿಯನ್ನು ಅಧಿಕಗೊಳಿಸುವುದು ಎಂದರು. ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಕೆ. ಬಸವರಾಜ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಜೆ.ಡಿ. ಸುರೇಶ್, ಕೊಡ್ಲಿಪೇಟೆ ವಲಯ ಸಂಪನ್ಮೂಲ ಅಧಿಕಾರಿ ರವಿ, ದೊಡ್ಡಕೊಡ್ಲಿ ಸರ್ಕಾರಿ ಶಾಲಾ ಮುಖ್ಯಶಿಕ್ಷಕ ಮಂಜುನಾಥ್, ಶಿಕ್ಷಕ ಫಯಾಜ್, ಇತರ ಶಾಲಾ ಶಿಕ್ಷಕರು, ಸಿಬ್ಬಂದಿ, ಹಳೆಯ ವಿದ್ಯಾರ್ಥಿಗಳ ಸಂಘ ಹಾಗೂ ಇತರ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು. ಕಾರ್ಯಕ್ರಮ ಆರಂಭಕ್ಕೆ ಮೊದಲು ಕೊಡ್ಲಿಪೇಟೆಯ ಗಣಪತಿ ದೇವಸ್ಥಾನದಿಂದ ದೊಡ್ಡಕೊಡ್ಲಿ ಗ್ರಾಮದ ಗಣಪತಿ ದೇವಸ್ಥಾನದವರೆಗೆ ವಿವಿಧ ಕಲಾ ತಂಡಗಳೊAದಿಗೆ ವಿಶೇಷ ದಾಖಲಾತಿ ಆಂದೋಲನ ಜಾಗೃತಿ ಜಾಥಾ ನಡೆಯಿತು. ಕೊಡ್ಲಿಪೇಟೆ ಸಮೂಹ ಸಂಪನ್ಮೂಲ ಕೇಂದ್ರ ವ್ಯಾಪ್ತಿಯ ಸರ್ಕಾರಿ ಶಾಲಾ ಮಕ್ಕಳು ಹಾಗೂ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.