ಶನಿವಾರಸಂತೆ, ಫೆ. ೨೨: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ, ಅಮ್ಮ ಚಾರಿಟಬಲ್ ಸಂಸ್ಥೆ ಹಾಗೂ ಶನಿವಾರಸಂತೆ ಗ್ರಾಮ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಹಾಸನದ ಅಮ್ಮ ಕಣ್ಣಿನ ಆಸ್ಪತ್ರೆ ಮತ್ತು ರೆಟಿನಾಕೇರ್ ಸೆಂಟರ್ ಸಹಯೋಗದೊಂದಿಗೆ ಉಚಿತ ನೇತ್ರ ಪರೀಕ್ಷಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಶಿಬಿರದಲ್ಲಿ ೯೩ ಮಂದಿ ಕಣ್ಣಿನ ತಪಾಸಣೆ ಮಾಡಿಸಿಕೊಂಡರು. ೪೫ ಮಂದಿಗೆ ಉಚಿತ ಕನ್ನಡಕ ವಿತರಿಸಲಾಯಿತು.

ಬೆಂಗಳೂರಿನ ನೇತ್ರ ತಜ್ಞರಾದ ಡಾ. ಎಂ.ಜಿ.ರಾಮಮೂರ್ತಿ ಹಾಗೂ ಡಾ.ಸಂದೀಪ್ ಮಾರ್ಗದರ್ಶನದಲ್ಲಿ ತಂಡದವರು ತಪಾಸಣೆ ನಡೆಸಿದರು. ಸೋಮವಾರಪೇಟೆ ತಾಲೂಕು ವೈದ್ಯಾಧಿಕಾರಿ ಡಾ.ಇಂದೂಧರ್, ಹಾಸನದ ಅಮ್ಮ ಕಣ್ಣಿನ ಆಸ್ಪತ್ರೆಯ ನೇತ್ರ ಪರೀಕ್ಷಕ ಮಹದೇವ, ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರದ ನೇತ್ರಾಧಿಕಾರಿ ಆದರ್ಶ, ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ್, ಸಿಬ್ಬಂದಿ ವರ್ಗ ಶುಶ್ರೂಷಕಿಯರು ಹಾಗೂ ಆಶಾ ಕಾರ್ಯಕರ್ತೆಯರು ಶಿಬಿರದಲ್ಲಿ ಕರ್ತವ್ಯ ನಿರ್ವಹಿಸಿದರು.