ಮಡಿಕೇರಿ, ಫೆ. ೨೧: ಹತ್ತು ಹೆಚ್.ಪಿ. ತನಕದ ಪಂಪ್ ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸು ವುದನ್ನು ವಿರೋಧಿಸಿ ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ರೈತರು ನಗರದ ಚೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿ ಕಾರ್ಯಪಾಲಕ ಅಭಿಯಂತರೆ ಅನಿತಾಬಾಯಿ ಅವರಿಗೆ ಮನವಿ ಸಲ್ಲಿಸಿದರು.
ಹಲವಾರು ಜಿಲ್ಲೆಗಳಲ್ಲಿ ವಾಣಿಜ್ಯ ಬೆಳೆಗಳಾದ ಅಡಿಕೆ, ಮಾವು, ಕಬ್ಬು ಮುಂತಾದ ಬೆಳೆಗಳಿಗೆ ರೈತರು ಉಪಯೋಗಿಸುತ್ತಿರುವ ೧೦ ಹೆಚ್‌ಪಿ ತನಕದ ಪಂಪ್ ಸೆಟ್‌ಗಳಿಗೆ ಸರ್ಕಾರದಿಂದ ಉಚಿತವಾಗಿ ವಿದ್ಯುತ್ ಪೂರೈಸಲಾಗುತ್ತಿದೆ. ಆದರೆ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಾಫಿ ಬೆಳೆಗಾರರು ಉಪಯೋಗಿಸುತ್ತಿರುವ ಪಂಪ್ ಸೆಟ್‌ಗಳಿಗೆ ವಿದ್ಯುತ್ ಶುಲ್ಕವನ್ನು ಪಾವತಿ ಮಾಡುವಂತಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಕೊಡಗಿನಲ್ಲಿ ಅಕಾಲಿಕ ಮಳೆ, ಬೆರಿ ಬೋರರ್ ಸಮಸ್ಯೆ ಇತ್ಯಾದಿ ಸಂಕಷ್ಟಗಳ ನಡುವೆ ಬೆಳೆದ ಬೆಳೆಗೆ ಸಮರ್ಪಕವಾದ ಬೆಲೆಯೂ ಸಿಗದೆ ಹಲವಾರು ವರ್ಷಗಳಿಂದ ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ಸಂಬAಧಿಸಿದವರು ಪರಿಸ್ಥಿತಿಯನ್ನು ಅವಲೋಕಿಸಿ ಕೊಡಗಿನ ಕಾಫಿ ಬೆಳೆಗಾರರ ಹತ್ತು ಹೆಚ್.ಪಿ. ತನಕದ ಪಂಪ್ ಸೆಟ್‌ಗಳಿಗೆ ಉಚಿತ ವಿದ್ಯುತ್ ಸರಬರಾಜು ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿ ರಾತ್ರಿಯೂ ಪ್ರತಿಭಟನೆ ಮುಂದುವರೆಸಿದರು. ಈ ಸಂದರ್ಭ ಚಂದ್ರಶೇಖರ್ ಹೇರೂರು, ಅರುಣ್ ಚಂಗಪ್ಪ, ಅರ್ಪಿತ್, ಜಗನ್ನಾಥ್, ನಂಜೇಗೌಡ, ಶಾಶ್ವತ್, ಅಯ್ಯಣ್ಣ, ಮತ್ತಿತರರು ಹಾಜರಿದ್ದರು.
ಇದೇ ವಿಚಾರಕ್ಕೆ ಸಂಬAಧಿಸಿದAತೆ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಅಮ್ಮತ್ತಿ ಹೋಬಳಿ ಅಧ್ಯಕ್ಷ ಪ್ರವೀಣ್ ಬೋಪಣ್ಣ ಅವರು ಚೆಸ್ಕಾಂ ಇಇ ಅವರಿಗೆ ಮನವಿ ಸಲ್ಲಿಸಿದರು.