ಮಡಿಕೇರಿ, ಫೆ. ೨೨: ರಾಷ್ಟಿçÃಯ ಆಯುಷ್ ಅಭಿಯಾನ ಯೋಜನೆಯಡಿ ಸಮುದಾಯ ಆರೋಗ್ಯ ಅಧಿಕಾರಿ ಹಾಗೂ ಮಲ್ಟಿಪರ್ಪಸ್ ವರ್ಕರ್ ಹುದ್ದೆಗಳ ನೇಮಕಾತಿ ಸಂಬAಧ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಜಿಲ್ಲಾ ಆಯುಷ್ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಆಯ್ಕೆಪಟ್ಟಿ ಕುರಿತಂತೆ ಆಕ್ಷೇಪಣೆಗಳು ಇದ್ದಲ್ಲಿ ತಾ. ೨೬ ರ ಸಂಜೆ ೪ ಗಂಟೆಯೊಳಗೆ ಜಿಲ್ಲಾ ಆಯುಷ್ ಅಧಿಕಾರಿ, ಆಯುಷ್ ಇಲಾಖೆ, ಮಹದೇವಪೇಟೆ, ಮಡಿಕೇರಿ ಕೊಡಗು ಜಿಲ್ಲೆ ಇವರಿಗೆ ಮನವಿ ಮೂಲಕ ಸಲ್ಲಿಸಬಹುದಾಗಿದೆ. ಈ ಅವಧಿಯ ನಂತರ ಸ್ವೀಕೃತವಾದ ಆಕ್ಷೇಪಣೆಗಳನ್ನು ತಿರಸ್ಕರಿಸಲಾಗುವುದು ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ. ರೇಣುಕಾದೇವಿ ತಿಳಿಸಿದ್ದಾರೆ