ಕಣಿವೆ, ಫೆ. ೨೨: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹೆಬ್ಬಾಲೆ ವಲಯದ ಒಕ್ಕೂಟಗಳಿಂದ ಹೆಬ್ಬಾಲೆಯಲ್ಲಿ ಸಾಧನ ಸಮಾವೇಶ ಹಾಗೂ ಸಾಮೂಹಿಕ ಸತ್ಯ ನಾರಾಯಣ ಪೂಜೆ ಕಾರ್ಯಕ್ರಮ ವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಕೊಡ್ಲಿಪೇಟೆ ಕಿರಿಕೊಡ್ಲಿಮಠದ ಪೀಠಾಧ್ಯಕ್ಷರಾದ ಸದಾಶಿವ ಸ್ವಾಮೀಜಿ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌಚಾಲಯದಿಂದ ದೇವಾಲಯ ದವರೆಗೂ, ಹುಟ್ಟಿದ ಮಗುವಿನಿಂದ ವಯೋವೃದ್ಧರವರೆಗೂ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡುತ್ತಾ ಬಂದಿರುವ ಅತೀ ದೊಡ್ಡ ಸಂಸ್ಥೆಯಾಗಿದೆ.
ಜನರ ಆರ್ಥಿಕ ಸುಸ್ಥಿರತೆಗೆ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಗ್ರಾಮಗಳ ಅಭಿವೃದ್ಧಿ ಯೋಜನೆ ಮೂಲಕ ಜನಕಲ್ಯಾಣ ಮಾಡುತ್ತಿದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಾಜಿ ಸಚಿವ ಅಪ್ಪಚ್ಚು ರಂಜನ್ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕೇಂದ್ರ ಸರ್ಕಾರದ ಸಿ.ಎಸ್.ಸಿ. ಕಾರ್ಯ ಕ್ರಮದ ಮೂಲಕ ರಾಜ್ಯದ ಮೂಲೆ ಮೂಲೆಗೂ ಅನುಷ್ಠಾನ ಮಾಡುತ್ತಿದೆ. ಮಹಿಳೆಯರು ತಾವು ಪಡೆದ ಸಾಲದ ಹಣವನ್ನು ಸಮರ್ಪಕವಾಗಿ ಹಾಗೂ ಸಕಾಲಿಕವಾಗಿ ಮರುಪಾವತಿ ಮಾಡು ವುದರಿಂದ ಮುಂದಿನ ಹಣಕಾಸು ವ್ಯವಹಾರಗಳು ಸುಭಿಕ್ಷವಾಗಿರುತ್ತದೆ ಎಂದರು.
ಧರ್ಮಸ್ಥಳ ಯೋಜನೆಯ ಜಿಲ್ಲಾ ನಿರ್ದೇಶಕಿ ಲೀಲಾವತಿ, ಯೋಜನೆ ಯಿಂದ ನಡೆಯುವ ಧಾರ್ಮಿಕ ಕಾರ್ಯಕ್ರಮಗಳು, ಸುಜ್ಞಾನ ನಿಧಿ, ಜ್ಞಾನದೀಪಾ, ಶಿಕ್ಷಕರ ಮಾಸಾಶನ ಪಲಾನುಭವಿಗಳು, ಕೆರೆಗಳ ಅಭಿವೃದ್ಧಿ ಯೋಜನೆಯ ಮಾಹಿತಿಗಳನ್ನು ನೀಡಿದರು.
ಹೆಬ್ಬಾಲೆಯ ವಲಯದ ಒಕ್ಕೂಟದ ಅಧ್ಯಕ್ಷ ಚೇತನ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಯೋಜ ನಾಧಿಕಾರಿ ರೋಹಿತ್, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎಂ. ಡಿಸಿಲ್ವ, ಹೆಬ್ಬಾಲೆಯ ಬಸವೇಶ್ವರ ದೇವಸ್ಥಾನ ಸಮಿತಿಯ ಸಿದ್ದಪ್ಪ, ಮೋಹನ್, ಅಬ್ಬೂರುಕಟ್ಟೆ ಗ್ರಾಮ ಪಂಚಾಯಿತಿ ಸದಸ್ಯ ಅಜಿತ್, ಶಿರಂಗಾಲದ ಮಂಟಿಗಮ್ಮ ದೇವಸ್ಥಾನ ಸಮಿತಿಯ ಅಧ್ಯಕ್ಷ ಎಸ್.ಎಸ್. ಚಂದ್ರಶೇಖರ್, ಕೆರೆ ಕಮಿಟಿ ಅಧ್ಯಕ್ಷ ರೇವಣ್ಣ, ಗಣಗೂರು ಧರ್ಮಪ್ಪ, ನೇಕಾರರ ಸಂಘದ ಅಧ್ಯಕ್ಷ ಟಿ.ಕೆ. ಪಾಂಡುರAಗ, ತೊರೆನೂರು ಸಹಕಾರ ಬ್ಯಾಂಕ್ ನಿರ್ದೇಶಕ ಕೆ.ಎಸ್. ಕೃಷ್ಣೆಗೌಡ್ರು ಹಾಗೂ ಸ್ವಸಹಾಯ ಸಂಘದ ಒಕ್ಕೂಟಗಳ ಪದಾಧಿಕಾರಿಗಳಿದ್ದರು.