ಹೆಬ್ಬಾಲೆ, ಫೆ. ೨೧: ಇಲ್ಲಿನ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸೇವೆಯಿಂದ ನಿವೃತ್ತಿಗೊಂಡ ಶಿಕ್ಷಕರನ್ನು ಸನ್ಮಾನಿಸಿ, ಬೀಳ್ಕೊಡಲಾಯಿತು.
ಹೆಬ್ಬಾಲೆಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ೧೨ ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಸಹ ಶಿಕ್ಷಕ ಹೆಚ್.ಈ. ರಮೇಶ ಹಾಗೂ ಶಿರಂಗಾಲ ಪ್ರೌಢಶಾಲೆಯಲ್ಲಿ ೧೮ ವರ್ಷ ಸೇವೆ ಸಲ್ಲಿಸಿದ ದ್ವಿತೀಯ ದರ್ಜೆ ಗುಮಾಸ್ತ ವಿಜಯ ಅವರನ್ನು ಕ್ಲಸ್ಟರ್ ವ್ಯಾಪ್ತಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಯ ಶಿಕ್ಷಕ ವರ್ಗದವರು ಸೇರಿ ಬೀಳ್ಕೊಟ್ಟರು.
ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕ ಹೆಚ್.ಎಂ. ವೆಂಕಟೇಶ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ ಪಾಲ್ಗೊಂಡಿದ್ದರು. ವೇದಿಕೆಯಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಆರ್.ಡಿ. ಲೋಕೇಶ್. ಸೋಮಯ್ಯ, ಸತ್ಯನಾರಾಯಣ, ಬಸವರಾಜಶೆಟ್ಟಿ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಗಣೇಶ್, ಕನ್ನಡ ಶಿಕ್ಷಕ ವೆಂಕಟನಾಯಕ್, ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾಜರಿದ್ದರು. ಶಿಕ್ಷಕಿಯರಾದ ಪುಪ್ಪಾವತಿ, ಜಾನಕಿ ಮತ್ತು ಬಬಿತಾ ತಂಡ ಪ್ರಾರ್ಥಿಸಿ, ಸಿ.ಅರ್.ಪಿ. ಅದರ್ಶ್ ಸ್ವಾಗತಿಸಿದರು. ಹಳೆಗೋಟೆ ಶಾಲೆಯ ಮುಖ್ಯ ಶಿಕ್ಷಕ ರಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ನಲ್ಲೂರು ಶಾಲೆಯ ಮುಖ್ಯ ಶಿಕ್ಷಕ ಚಂದ್ರು ಕಾರ್ಯಕ್ರಮ ನಿರ್ವಹಿಸಿದರು. ಸಹ ಶಿಕ್ಷಕಿ ಸಿ.ಎಂ. ಬಬಿತಾ ವಂದಿಸಿದರು.