ಮಡಿಕೇರಿ, ಫೆ. ೨೨: ಮಡಿಕೇರಿಯ ಸಂತ ಜೋಸೆಫರ ಕಾನ್ವೆಂಟ್ ಸಂಯುಕ್ತ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ವಿಖ್ಯಾತ್ ಎಂ ರೈ ಮತ್ತು ಟಿ.ಎಲ್. ಹರ್ಷಿತ್ ಪೊನ್ನಪ್ಪ ಅವರುಗಳು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಇವರ ಸಂಯುಕ್ತ ಆಶ್ರಯದಲ್ಲಿ ನಡೆಸಿದ ಪ್ರಾಚ್ಯ ಪ್ರಜ್ಞೆ ಎಂಬ ಮಡಿಕೇರಿಯಲ್ಲಿ ನಡೆದ ಎರಡು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಬಾಗಲಕೋಟೆಯಲ್ಲಿ ನಡೆದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪತ್ರವನ್ನು ಪಡೆದುಕೊಂಡಿರುತ್ತಾರೆ.