ಚೆಟ್ಟಳ್ಳಿ, ಫೆ. ೨೧: ಕಾಫಿ ಮಂಡಳಿ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪಂಗಡದ ಕಾರ್ಮಿಕರ ಮಕ್ಕಳಿಗೆ ಮಡಿಕೇರಿಯ ಕಾಫಿ ಮಂಡಳಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವೇತನ ನೀಡಲಾಯಿತು.

ಪಿ.ಯು.ಸಿ.ಯಿಂದ ಉನ್ನತ ಶಿಕ್ಷಣವರೆಗೆ ವ್ಯಾಸಂಗ ಮಾಡುತ್ತಿರುವ ೧೧೨ ವಿದ್ಯಾರ್ಥಿಗಳಿಗೆ ಒಟ್ಟು ರೂ. ೪.೯೪ ಲಕ್ಷ ವಿದ್ಯಾರ್ಥಿ ವೇತನವನ್ನು ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ವರ್ಗಾಯಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಫಿ ಮಂಡಳಿಯ ನಿರ್ದೇಶಕ ಟಿ. ಕಿಶೋರ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಉನ್ನತ ಶಿಕ್ಷಣವನ್ನು ಪಡೆಯುವಂತಾಗಬೇಕೆAದರು. ಕಾಫಿ ಮಂಡಳಿ ವತಿಯಿಂದ ಬೆಳೆಗಾರರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಬೆಳೆಗಾರರು ಸದುಪಯೋಗಿಸುವಂತೆ ಕರೆ ನೀಡಿದರು.

ಕರ್ನಾಟಕ ರಾಜ್ಯ ಕಾಫಿ ಮಂಡಳಿಯ ಜಂಟಿ ನಿರ್ದೇಶಕ ಚೌದರಿ ವಿದ್ಯಾರ್ಥಿ ವೇತನವನ್ನು ವಿತರಿಸಿದರು. ಈ ಸಂದರ್ಭ ಮಡಿಕೇರಿ ಕಾಫಿ ಮಂಡಳಿಯ ಉಪ ನಿರ್ದೇಶಕ ಡಾ. ಚಂದ್ರಶೇಖರ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.