ಕಣಿವೆ, ಫೆ. ೨೨: ಹಕ್ಕುಪತ್ರಕ್ಕಾಗಿ ತಾಲೂಕು ವ್ಯಾಪ್ತಿಯ ಸಾರ್ವಜನಿಕರು ಅಕ್ರಮ-ಸಕ್ರಮ ಯೋಜನೆಯಡಿ ಅರ್ಜಿ ಸಲ್ಲಿಸಿದ್ದು, ಆದಷ್ಟು ಬೇಗನೇ ಹಕ್ಕು ಪತ್ರಗಳನ್ನು ನೀಡಬೇಕು ಎಂದು ಕೂಡುಮಂಗಳೂರು ಗ್ರಾ.ಪಂ. ಸದಸ್ಯ ಕೆ.ಬಿ. ಷಂಶುದ್ದೀನ್ ಕುಶಾಲನಗರ ತಾಲೂಕು ತಹಶೀಲ್ದಾರ್ಗೆ ಮನವಿ ಸಲ್ಲಿಸಿದ್ದಾರೆ.
ಕುಶಾಲನಗರ ತಾಲೂಕು ವ್ಯಾಪ್ತಿಯ ನೂರಾರು ಜನರು ಹಕ್ಕುಪತ್ರಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಕೆಲವರು ಅರ್ಜಿ ಸಲ್ಲಿಸಿ ಹಲವು ವರ್ಷಗಳು ಕಳೆದಿದೆ. ಸರ್ಕಾರಿ ಸೌಲಭ್ಯ ಹಾಗೂ ಇನ್ನಿತರ ಅನುಕೂಲಗಳನ್ನು ಪಡೆಯಲು ಸಾರ್ವಜನಿಕರಿಗೆ ಹಕ್ಕುಪತ್ರ ಅತ್ಯಗತ್ಯವಾಗಿದೆ. ದಿನೇ ದಿನೇ ಸಾರ್ವಜನಿಕರು ಹಕ್ಕುಪತ್ರಕ್ಕಾಗಿ ಕಚೇರಿಗೆ ಅಲೆದಾಡುವ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಆದಷ್ಟು ಬೇಗನೇ ಸಾರ್ವಜನಿಕರಿಗೆ ಹಕ್ಕುಪತ್ರವನ್ನು ನೀಡಿ ಸಹಕರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಅಲ್ಲದೇ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ೫ ಸಾವಿರ ಹಕ್ಕುಪತ್ರಗಳನ್ನು ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಆ ಸಂದರ್ಭ ಕೆಲವರ ಹಕ್ಕುಪತ್ರದಲ್ಲಿ ಅಳತೆಯ ವ್ಯತ್ಯಾಸ ಕಂಡುಬAದಿದೆ. ಅವುಗಳನ್ನು ಕೂಡಾ ಸರಿಪಡಿಸಿಕೊಡಬೇಕು ಎಂದು ಷಂಶುದ್ದೀನ್ ಮನವಿ ಮಾಡಿದ್ದು, ಆದಷ್ಟು ಬೇಗನೇ ಸಾರ್ವಜನಿಕರಿಗೆ ಹಕ್ಕುಪತ್ರ ವಿತರಿಸಲಾಗುವುದು ಎಂದು ತಹಶೀಲ್ದಾರ್ ಕಿರಣ್ ಗೌರಯ್ಯ ಭರವಸೆ ನೀಡಿದ್ದಾರೆ.