ವೀರಾಜಪೇಟೆ, ಫೆ. ೨೩: ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ವತಿಯಿಂದ ೮೮ನೇ ತ್ರಿಮೂರ್ತಿ ಶಿವ ಜಯಂತಿ ಮಹೋತ್ಸವದ ಪ್ರಯುಕ್ತ ತಾ. ೨೫ ರಂದು ವೀರಾಜಪೇಟೆ ತಾಲೂಕು ಮೈದಾನದಲ್ಲಿ ಭಾರತದ ಪ್ರಸಿದ್ಧ ದ್ವಾದಶ ಜ್ಯೋತಿರ್ಲಿಂಗಗಳ ಪುಣ್ಯದರ್ಶನ ಮತ್ತು ಅಧ್ಯಾತ್ಮಿಕ ಚಿತ್ರಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ.

ತಾ. ೨೫ ರಿಂದ ಮಾರ್ಚ್ ೧ ರ ತನಕ ನಗರದ ತಾಲೂಕು ಮೈದಾನದಲ್ಲಿ ನಡೆಯುವ ಜ್ಯೋತಿರ್ಲಿಂಗಗಳ ಪುಣ್ಯದರ್ಶನದ ಉದ್ಘಾಟನೆಯನ್ನು ಬೆಳಿಗ್ಗೆ ೧೦.೩೦ಕ್ಕೆ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರು, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಉದ್ಘಾಟಿಸಲಿದ್ದಾರೆ. ಮೈಸೂರು ಬ್ರಹ್ಮಾಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯದ ಮುಖ್ಯ ಸಂಚಾಲಕರಾದ ರಾಜಯೋಗಿನಿ ಬಿ.ಕೆ. ಲಕ್ಷಿö್ಮÃಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ವೀರಾಜಪೇಟೆ ಸಮೀಪದ ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿ ಅಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಾಲೂಕು ಡಿ.ವೈ.ಎಸ್.ಪಿ., ಆರ್. ಮೋಹನ್ ಕುಮಾರ್ ಮತ್ತು ವೃತ್ತನಿರೀಕ್ಷಕ ಬಿ.ಎಸ್. ಶಿವರುದ್ರ ಭಾಗವಹಿಸಲಿದ್ದಾರೆ.

ಆರು ದಿನಗಳ ಕಾಲ ಪ್ರವಚನ, ಜೀವನದಲ್ಲಿ ಸುಖ ಶಾಂತಿ, ನೆಮ್ಮದಿ ಮತ್ತು ಉತ್ತಮ ಆರೋಗ್ಯ ದೊರಕಲೆಂದು ಜ್ಯೋತಿರ್ಲಿಂಗಗಳ ಪುಣ್ಯ ದರ್ಶನಕ್ಕಾಗಿ ಬೆಳಿಗ್ಗೆ ೭ ಗಂಟೆಯಿAದ ರಾತ್ರಿ ೮ ಗಂಟೆವರೆಗೆ ಮಹಿಳೆಯರಿಗೆ, ಮಕ್ಕಳಿಗೆ, ಸಾರ್ವಜನಿಕರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಿರುವುದಾಗಿ ಜ್ಞಾನ ಗಂಗಾ ಭವನದ ಮುಖ್ಯಸ್ಥ ಕೋಮಲ ತಿಳಿಸಿದ್ದಾರೆ.