ಫೆ. ೨೩: ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಪ್ರಥಮ ವರ್ಷದ ಎಂ.ಬಿ.ಎ. ಹಾಗೂ ಎಂ.ಟೆಕ್ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವು ಕೆ.ವಿ.ಜಿ.ಸಿ.ಇ. ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.

ಈ ಸಮಾರಂಭಕ್ಕೆ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಆಧುನಿಕ ಜೀವನದಲ್ಲಿ ಎಂ.ಬಿ.ಎ. ಮತ್ತು ಎಂ.ಟೆಕ್ ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿ ಹಾಗೂ ಪರಿಶ್ರಮದಿಂದ ಯಶಸ್ಸನ್ನು ಗಳಿಸಲು ಪೂರಕವಾದ ನಡವಳಿಕೆಯನ್ನು ಅಳವಡಿಸಿಕೊಳ್ಳಬೇಕೆಂದು ಹೇಳಿದರು.

ðಗಳಿಗೆ ಸ್ವಾಗತ ಕಾರ್ಯಕ್ರಮಈ ಸಂದರ್ಭ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ ಹಾಗೂ ಇಂಜಿನಿಯರಿAಗ್ ವಿಭಾಗದ ಮುಖ್ಯಸ್ಥ ಡಾ. ಉಜ್ವಲ್ ಯು.ಜೆ. ಮಾತನಾಡಿ, ಕೆ.ವಿ.ಜಿ ಕಾಲೇಜು ಹೊಸ ತಂತ್ರಜ್ಞಾನಕ್ಕೆ ಅನುಗುಣವಾಗಿ ಕಾಲೇಜಿನ ಶೈಕ್ಷಣಿಕ ಪದ್ಧತಿಯಲ್ಲೂ ಅತೀ ಹೆಚ್ಚಿನ ಪ್ರಾಮುಖ್ಯತೆಯನ್ನು ಪ್ರಾಯೋಗಿಕ ವಿಷಯಗಳಿಗೆ ನೀಡುತ್ತಿದೆ ಹಾಗೂ ಉದ್ಯೋಗ ತರಬೇತಿಗಳನ್ನು ನೀಡುತ್ತಿದ್ದು ಇದರ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಂಡು ಉತ್ತಮ ರೀತಿಯ ಉದ್ಯೋಗ ಪಡೆದು ಕಾಲೇಜಿಗೆ ಉತ್ತಮ ಹೆಸರು ತರಬೇಕೆಂದು ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ ವಿ. ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಜೀವನದಲ್ಲಿ ಶಿಸ್ತು ಮತ್ತು ನೈಪುಣ್ಯತೆ, ಉತ್ತಮ ಶ್ರೇಣಿಯನ್ನು ಗಳಿಸುವುದರೊಂದಿಗೆ ಯಶಸ್ವಿ ಜೀವನಕ್ಕೆ ಉನ್ನತ ವಿದ್ಯಾಭ್ಯಾಸದ ಅವಶ್ಯಕತೆಯನ್ನು ತಿಳಿಯಪಡಿಸಿದರು. ಕಾರ್ಯಕ್ರಮದಲ್ಲಿ ಎಂ.ಬಿ.ಎ. ವಿಭಾಗದ ಮುಖ್ಯಸ್ಥ ಪ್ರೊ. ಕೃಷ್ಣಾನಂದ ಎ. ಅತಿಥಿಗಳನ್ನು ಪರಿಚ ಯಿಸಿದರು ಹಾಗೂ ಸ್ವಾಗತಿಸಿದರು. ಪ್ರೊ. ಮನೋಹರ್ ಎ.ಎನ್. ವಂದನಾರ್ಪಣೆಗೈದರು. ಎಂ.ಬಿ.ಎ. ಅಂತಿಮ ವಿಭಾಗದ ವಿದ್ಯಾರ್ಥಿಗಳಾದ ಗಾಯತ್ರಿ ಎನ್. ನಂಬಿಯಾರ್ ಹಾಗೂ ಶಿಫಾ ಎಂ.ಎ. ಕಾರ್ಯಕ್ರಮವನ್ನು ನಿರೂಪಿಸಿದರು. ಉಪಪ್ರಾಂಶುಪಾಲ ಡಾ. ಶ್ರೀಧರ್ ಕೆ, ಕಾಲೇಜಿನ ಆಡಳಿತಾಧಿಕಾರಿ ನಾಗೇಶ್ ಕೊಚ್ಚಿ, ಎಂ.ಬಿ.ಎ. ವಿಭಾಗದ ಎಲ್ಲ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.