ಶನಿವಾರಸAತೆ, ಫೆ. ೨೩: ಸಮೀಪದ ಕೊಡ್ಲಿಪೇಟೆಯ ಕಲ್ಲಳ್ಳಿಮಠ ಶ್ರೀ ಗುರುಪೀಠ ಹಾಗೂ ವೀರಶೈವ ಮಂಡಳಿ ಸಹಭಾಗಿತ್ವದಲ್ಲಿ ಶ್ರೀ ಕ್ಷೇತ್ರ ಕಲ್ಲಳ್ಳಿಮಠದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ತಾ. ೨೮ ಮತ್ತು ೨೯ ರಂದು ಮಠದ ಆವರಣದಲ್ಲಿ ನಡೆಯಲಿದೆ.

ತಾ. ೨೮ ರಂದು ಸಂಜೆ ೬ ಗಂಟೆಯಿAದ ೭ ಗಂಟೆಯವರೆಗೆ ಗೋಧೂಳಿ ಲಗ್ನದಲ್ಲಿ ಗಂಗಾ ಪೂಜಾ ಕಾರ್ಯಕ್ರಮ ಹಾಗೂ ಪ್ರಸಾದ ವಿನಿಯೋಗ ನಡೆಯಲಿದೆ. ತಾ. ೨೯ ರಂದು ಬೆಳಿಗ್ಗೆ ೫ ಗಂಟೆಗೆ ವಟುಗಳಿಗೆ ದೀಕ್ಷಾ ಕಾರ್ಯಕ್ರಮ, ವಾಸ್ತು ಅಘೋರ ಕಲಶ ಪೂಜೆ, ಸಪ್ತಸಭಾ ದೇವತಾಪೂಜೆ, ಅಷ್ಟದಿಕ್ಪಾಲಕರ ಪೂಜೆ, ನವಗ್ರಹ ಪೂಜೆ, ಉಮಾಮಹೇಶ್ವರಿ ಪೂಜೆ, ಮಹಾ ಮೃತ್ಯುಂಜಯ ಪೂಜೆ ಮತ್ತು ಹೋಮ-ಹವನ ಪೂರ್ಣಾಹುತಿ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ ೧೦ ಗಂಟೆಗೆ ನಡೆಯುವ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ನೊಣವಿನಕೆರೆ ಕಾಡುಸಿದ್ಧೇಶ್ವರ ಮಠದ ಡಾ. ಶಿವಾನುಭವ ಚರವರ್ಯ ಕರಿವೃಷಭದೇಶೀಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ, ಅಳಂದ ಕೋರಣೇಶ್ವರ ವಿರಕ್ತಮಠದ ಮುರು ಗೇಂದ್ರ ಕೋರಣೇಶ್ವರ ಶಿವಯೋಗಿ ಸ್ವಾಮೀಜಿ, ರಾವಂದೂರು ಮುರುಘಾಮಠದ ಮೋಕ್ಷಪತಿ ಮಹಾಸ್ವಾಮೀಜಿ, ಶನಿವಾರಸಂತೆ ಮಾದ್ರೆ ಗ್ರಾಮದ ಮುದ್ದಿನಕಟ್ಟೆ ಮಠದ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ವೀರಾಜಪೇಟೆ ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿ ಕಾರ್ಜುನ ಸ್ವಾಮೀಜಿ, ಯಸಳೂರು ತೆಂಕಲ ಗೋಡು ಮಠದ ಚನ್ನಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ, ಕಲ್ಲುಮಠದ ಮಹಾಂತ ಸ್ವಾಮೀಜಿ, ಕಿರಿಕೊಡ್ಲಿಮಠದ ಸದಾಶಿವ ಸ್ವಾಮೀಜಿ, ಶ್ರೀತಪೋವನ ಕ್ಷೇತ್ರ ಮನೆಹಳ್ಳಿ ಮಠದ ಮಹಾಂತ ಶಿವಲಿಂಗ ಸ್ವಾಮೀಜಿ, ಚಂಗಡಹಳ್ಳಿ ಮಠದ ಬಸವ ಮಹಾಂತ ಮಹಾಸ್ವಾಮೀಜಿ ಹಾಗೂ ಕೆಸತ್ತೂರು ಮಠದ ಬಸವರಾಜೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸುತ್ತಾರೆ. ಕೊಡ್ಲಿಪೇಟೆ ವೀರಶೈವ ಸಮಾಜದ ಅಧ್ಯಕ್ಷ ಎಸ್.ಎಸ್. ವರಪ್ರಸಾದ್ ಅಧ್ಯಕ್ಷತೆ ವಹಿಸುತ್ತಾರೆ. ಮುಖ್ಯ ಅತಿಥಿಗಳಾಗಿ ಸಂಸದ ಪ್ರತಾಪ್ ಸಿಂಹ, ಶಾಸಕ ಡಾ. ಮಂಥರ್ ಗೌಡ, ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಸಕಲೇಶಪುರ-ಆಲೂರು ವಿಧಾನಸಭಾ ಕ್ಷೇತ್ರ ಶಾಸಕ ಸಿಮೆಂಟ್ ಮಂಜು, ಹಿರಿಯ ವಕೀಲ ಹೆಚ್.ಎಸ್. ಚಂದ್ರಮೌಳಿ, ಯು.ಎಸ್.ಎ. ವಿಜಯಕುಮಾರ್, ಮೈಸೂರಿನ ಲೀಲಾ ಹೇಮರಾಜ್ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ ಎಂದು ಕಲ್ಲಳ್ಳಿಮಠ ಶ್ರೀ ಗುರುಪೀಠ ಆಡಳಿತ ಮಂಡಳಿ ಅಧ್ಯಕ್ಷ ರುದ್ರಮುನಿ ಸ್ವಾಮೀಜಿ, ಪದಾಧಿಕಾರಿಗಳು ಹಾಗೂ ವೀರಶೈವ ಸಮಾಜ ಪ್ರಕಟಣೆಯಲ್ಲಿ ತಿಳಿಸಿದೆ.