ಕೂಡಿಗೆ, ಫೆ. ೨೩: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಮತ್ತು ಸೋಮವಾರಪೇಟೆ ತಾಲೂಕು ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ, ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ತಾ.೨೪ರಂದು (ಇಂದು) ಕೂಡಿಗೆಯ ಕ್ರೀಡಾ ಶಾಲೆಯಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಬೋಸರಾಜು ನೆರವೇರಿಸುವರು. ಅಧ್ಯಕ್ಷತೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ವಹಿಸುವರು. ಮುಖ್ಯ ಅತಿಥಿಗಳಾಗಿ ವಿರಾಜಪೇಟೆ ಕ್ಷೇತ್ರದ ಶಾಸಕ ಎ. ಎಸ್. ಪೊನ್ನಣ್ಣ, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ. ಸುಜಾ ಕುಶಾಲಪ್ಪ, ಇತರರು ಪಾಲ್ಗೊಳ್ಳುವರು.