ಮಡಿಕೇರಿ, ಫೆ. ೨೩: ಕುಶಾಲನಗರ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಹಾಗೂ ಗುಡ್ಡೆಹೊಸೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಬೊಳ್ಳೂರು ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಮಿಶ್ರ ತಳಿ ಕರು ಮತ್ತು ಜಾನುವಾರುಗಳ ಪ್ರದರ್ಶನ ಕಾರ್ಯಕ್ರಮ ನಡೆಯಲಿದೆ.
ತಾ. ೨೪ ರಂದು (ಇಂದು) ಬೆಳಿಗ್ಗೆ ೧೦ ಗಂಟೆಗೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು, ಗುಡ್ಡೆಹೂಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ ಅಧಕ್ಷತೆ ವಹಿಸಲಿದ್ದಾರೆ. ಉಪಾಧ್ಯಕ್ಷ ಎಂ.ಆರ್. ಮಾದಪ್ಪ ಉದ್ಘಾಟನೆ ನೆರವೇರಿಸಲಿದ್ದಾರೆ. ಜಿಲ್ಲಾ ಪಶು ಸಂಗೋಪನ ಇಲಾಖೆಯ ಉಪನಿರ್ದೇಶಕ ಡಾ. ಲಿಂಗರಾಜು ದೊಡ್ಡಮನಿ ಭಾಗವಹಿಸಲಿದ್ದಾರೆ.