ಪೊನ್ನಂಪೇಟೆ, ಫೆ.೨೩ : ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ನೂತನ ಅಧ್ಯಕ್ಷರಾಗಿ ಪಿ.ಎ. ಹನೀಫ್ ಪುನರ್ ನೇಮಕಗೊಂಡಿದ್ದಾರೆ. ಅವರ ಹೆಸರನ್ನು ಎಐಸಿಸಿ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಇಮ್ರಾನ್ ಪ್ರತಾಪ್ ಗರ್ಹಿ ಅನುಮೋದನೆಗೊಳಿಸಿದ್ದಾರೆ ಎಂದು ಎಐಸಿಸಿ ಅಲ್ಪಸಂಖ್ಯಾತರ ವಿಭಾಗದ ರಾಷ್ಟಿçÃಯ ಸಂಯೋಜಕರು ಮತ್ತು ಕರ್ನಾಟಕ ಉಸ್ತುವಾರಿ ಜೀನಾಲ್ ಎನ್. ಗಾಲ ತಮ್ಮ ನೇಮಕಾತಿ ಪತ್ರದಲ್ಲಿ ತಿಳಿಸಿದ್ದಾರೆ.

ಪಿ.ಎ. ಹನೀಫ್ ಅವರನ್ನು ಕಳೆದ ಆಗಸ್ಟ್ನಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷರಾಗಿ ನೇಮಿಸಲಾಗಿತ್ತು. ಆದರೆ ಕೆಲ ದಿನಗಳ ಹಿಂದೆ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಘಟಕ ಸೇರಿದಂತೆ ಎಲ್ಲಾ ಜಿಲ್ಲಾ ಮತ್ತು ಬ್ಲಾಕ್ ಸಮಿತಿಗಳನ್ನು ವಿಸರ್ಜನೆಗೊಳಿಸಲಾಗಿತ್ತು. ಈ ಕಾರಣದಿಂದ ಹನೀಫ್ ಅವರನ್ನು ಇದೀಗ ಮತ್ತೆ ಅಧ್ಯಕ್ಷರಾಗಿ ನೇಮಕಗೊಳಿಸಲಾಗಿದೆ.