ಸುಂಟಿಕೊಪ್ಪ, ಫೆ. ೨೩: ನಾಕೂರು ಕಾನ್‌ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್‌ನ ವತಿಯಿಂದ ೨೪ನೇ ವರ್ಷದ ಕ್ರೀಡೋತ್ಸವ ತಾ. ೨೫ ರಂದು ಕಾನ್‌ಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದು, ಜಿಲ್ಲಾಮಟ್ಟದ ಮುಕ್ತ ವಾಲಿಬಾಲ್ ಪಂದ್ಯಾವಳಿ, ಸ್ಥಳೀಯ ಪುರುಷರಿಗೆ ಕಬಡ್ಡಿ ಪಂದ್ಯಾಟ, ಸ್ಥಳೀಯ ಮಹಿಳೆಯರಿಗೆ ಥ್ರೋಬಾಲ್ ಹಾಗೂ ಮಕ್ಕಳಿಗೆ ವಿವಿಧ ಗ್ರಾಮೀಣ ಕ್ರೀಡಾಕೂಟ ಹಾಗೂ ಡ್ಯಾನ್ಸ್ ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಫ್ರೆಂಡ್ಸ್ ಯೂತ್ ಕ್ಲಬ್‌ನ ಅಧ್ಯಕ್ಷ ಬಿ.ಎ. ವಸಂತ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದರು.