ಮಡಿಕೇರಿ, ಫೆ. ೨೩: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಇಂಡಿಜೀನಿಯಸ್ ಟೆಕ್ನಾಲಜೀಸ್ ಫಾರ್ ಸೊಸೈಟಲ್ ಡೆವಲಪ್ಮೆಂಟ್ ಎಂಬ ವಿಷಯ ಕುರಿತು ತಾ.೨೮ ರಂದು ರಾಷ್ಟಿçÃಯ ವಿಜ್ಞಾನ ದಿನಾಚರಣೆಯನ್ನು ಅಕಾಡೆಮಿ ಕಚೇರಿಯಲ್ಲಿ (ಪ್ರೊ.ಯು.ಆರ್.ರಾವ್ ವಿಜ್ಞಾನ ಭವನ, ಮೇ, ಸಂದೀಪ್ ಉನ್ನಿಕೃಷ್ಣನ್ ರಸ್ತೆ, ತೋಟಗಾರಿಕಾ ವಿಜ್ಞಾನಗಳ ಕಾಲೇಜು ಆವರಣ, ಜಿಕೆವಿಕೆ, ವಿದ್ಯಾರಣ್ಯಪುರ ಅಂಚೆ, ಬೆಂಗಳೂರು-೫೬೦೦೯೭) ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಭಾಗವಹಿಸಬಹುದು. ಡ್ರಾಯಿಂಗ್ ಮತ್ತು ಪೆಯಿಂಟಿAಗ್ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಈ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ವಿತರಿಸಲಾಗುತ್ತದೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ವಿದ್ಯಾರ್ಥಿಗಳು ಗೂಗಲ್ ಫಾರ್ಮ್ hಣಣಠಿs://ಜಿoಡಿms.gie/e೫UbmಉWಞಞಚಿಅ೧uಣgಐಂ ಮೂಲಕ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಅಕಾಡೆಮಿಯ ವೆಬ್ಸೈಟ್ hಣಣಠಿ://ತಿತಿತಿ.ಞsಣಚಿಛಿಚಿಜemಥಿ.iಟಿ ನ್ನು ವೀಕ್ಷಿಸಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.